ಡಿಕೆಶಿ ವಿರುದ್ಧ ಹಣ ಹಂಚಿದ ಆರೋಪ: ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಮೇ 13: ಸಚಿವ ಡಿ.ಕೆ.ಶಿವಕುಮಾರ್ ಅವರು ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಹಣ ಹಂಚಿಕೆ ನಡೆಸಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಿಜೆಪಿ, ಡಿ.ಕೆ.ಶಿವಕುಮಾರ್ ಅವರು ಉಪಚುನಾವಣೆಯನ್ನು ಹಣದ ಬಲದಿಂದ ಗೆಲ್ಲುವ ಯತ್ನ ಮಾಡುತ್ತಿದ್ದಾರೆ, ಹುಬ್ಬಳ್ಳಿಯಲ್ಲಿ ಅವರು ತಂಗಿರುವ ಕಾಟನ್ ಕೌಂಟಿ ಹೊಟೆಲ್‌ನಲ್ಲಿ ಪಕ್ಷದ ಮುಖಂಡರಿಗೆ ಮತ್ತಿತರಿಗೆ ಹಣ ಹಂಚುತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮತದಾರರಿಗೆ ಹಂಚಲು, ಆ ಮೂಲದ ಮತದಾರರ ಮೇಲೆ ಪ್ರಭಾವ ಬೀರಲು ಡಿ.ಕೆ.ಶಿವಕುಮಾರ್‌ ಅವರು ಹೀಗೆ ಹಣ ಹಚುತ್ತಿದ್ದು, ಅಧಿಕಾರಿಗಳನ್ನೂ ಸಹ ತಮ್ಮ ಪಕ್ಷದ ಪರವಾಗಿ ಕೆಲವ ಮಾಡುವಂತೆ ಸೂಚಿಸಿದ್ದಾರೆ, ಡಿಕೆಶಿ ಸಚಿವರಾಗಿರುವ ಕಾರಣ ಅಧಿಕಾರಿಗಳು ಕಾಂಗ್ರೆಸ್‌ ಪರ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ನೀಡಿರವ ದೂರಿನಲ್ಲಿ ಉಲ್ಲೇಖಿಸಿದೆ.

BJP accused that DK Shivakumar distrubuting money in by election

ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಿ, ಪಾರದರ್ಶಕ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ರಾಜ್ಯ ಬಿಜೆಪಿಯು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದು ಪ್ರತ್ಯೇಕ ದೂರಿನಲ್ಲಿ ಸಿದ್ದರಾಮಯ್ಯ ಮತ್ತು ಸಿ.ಎಂ.ಇಬ್ರಾಹಿಂ ಅವರ ವಿರುದ್ಧವೂ ಸಹ ಸಬಿಜೆಪಿ ದೂರು ನೀಡಿದ್ದು, ಇಬ್ಬರನ್ನೂ ಸಹ 72 ಗಂಟೆಗಳ ಕಾಲ ಉಪಚುನಾವಣೆಯಲ್ಲಿ ಪ್ರಚಾರ ಮಾಡದಂತೆ ನಿಷೇಧ ಹೇರಬೇಕೆಂದು ಕೋರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+