ಜಯನಗರ, ಆರ್.ಆರ್. ನಗರ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಬೆಂಗಳೂರು, ಮೇ 20: ನಗರದ ಜಯನಗರ ಮತ್ತು ರಾಜರಾಜೇಶ್ವರಿ ನಗರ ಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ.

ಕರ್ನಾಟಕ ಶಾಸನಸಭೆಯಲ್ಲಿ 104 ಸ್ಥಾನಗಳನ್ನು ಗೆದ್ದು ಬಹುಮತಕ್ಕೆ ಬೇಕಾದ 113 ಸ್ಥಾನಗಳಿಗಿಂತ 9 ಸ್ಥಾನಗಳನ್ನು ಕಡಿಮೆ ಹೊಂದಿರುವ ಬಿಜೆಪಿಗೆ ಈ ಚುನಾವಣೆಗಳು ಬಹಳ ಮುಖ್ಯವಾಗಿವೆ.

ಹೀಗಾಗಿ ಶತಾಯ ಗತಾಯ ಈ ಎರಡೂ ಚುನಾವಣೆಗಳನ್ನು ಗೆಲ್ಲಲೇಬೇಕು ಎಂದು ಹೊರಟಿರುವ ಬಿಜೆಪಿ ಜಯನಗರಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಿದೆ. ಇನ್ನು ರಾಜರಾಜೇಶ್ವರಿ ನಗರಕ್ಕೆ ಮತ್ತೋರ್ವ ಕೇಂದ್ರ ಸಚಿವ ಡಿವಿ ಸದಾನಂದ ಗೌಡರನ್ನು ಉಸ್ತುವಾರಿಯಾಗಿ ನೇಮಿಸಿದೆ.

 BJP appoints incharges for Jayanagar and RR Nagar assembly elections

ಬಿಜೆಪಿ ಶಾಸಕ ಮತ್ತು ಜಯನಗರ ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ನಿಧನದಿಂದ ಇಲ್ಲಿ ಚುನಾವಣೆ ಮುಂದೂಡಲಾಗಿತ್ತು. ಇನ್ನು ರಾಜರಾಜೇಶ್ವರಿ ನಗರದಲ್ಲಿ ಅಕ್ರಮವಾಗಿ 9,746 ಮತದಾರರ ಪಟ್ಟಿಗಳು ಅಪಾರ್ಟ್ ಮೆಂಟ್ ಒಂದರಲ್ಲಿ ಸಿಕ್ಕಿದ್ದರಿಂದ ಚುನಾವಣೆಯನ್ನು ಮುಂದೂಡಲಾಗಿತ್ತು.

ರಾಜರಾಜೇಶ್ವರಿ ನಗರದಲ್ಲಿ ಮೇ 28ಕ್ಕೆ ಚುನಾವಣೆ ನಡೆಯಲಿದ್ದು ಮೇ 31ರಂದು ಮತ ಎಣಿಕೆ ನಡೆಯಲಿದೆ. ಜೂನ್ 11 ರಂದು ರಾಜರಾಜೇಶ್ವರಿ ನಗರಕ್ಕೆ ಚುನಾವಣೆ ನಡೆಯಲಿದ್ದು ಜೂನ್ 16ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+