ಬಿಜೆಪಿ ಉಪಾಧ್ಯಕ್ಷರಾಗಿ ತೇಜಸ್ವಿನಿ ಅನಂತ್ ಕುಮಾರ್ ನೇಮಕ
Recommended Video

ಬೆಂಗಳೂರು, ಏಪ್ರಿಲ್ 02: ಕೇಂದ್ರದ ಮಾಜಿ ಸಚಿವ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, "ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಿರುವುದಾಗಿ ಘೋಷಿಸಲು ನನಗೆ ಅತೀವ ಸಂತಸವಾಗುತ್ತಿದೆ. ಅವರಿಗೆ ನನ್ನ ಶುಭ ಹಾರೈಕೆಗಳು" ಎಂದಿದ್ದಾರೆ.
I am very delighted to announce that Smt. @Tej_AnanthKumar has been appointed as state vice president of @BJP4Karnataka.
— Chowkidar B.S. Yeddyurappa (@BSYBJP) April 2, 2019
Wishing her all the very best.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್ ಅವರೇ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ನಡೆದ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿತ್ತು.

ತಮಗೆ ಟಿಕೆಟ್ ಸಿಗದಿರುವ ಬಗ್ಗೆ ಬೇಸರವಿಲ್ಲ. ತಾವು ಬಿಜೆಪಿ ಅಭ್ಯರ್ಥಿಯ ಪರವೇ ಪ್ರಚಾರ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಆಸೆ. ಅನಂತ್ ಕುಮಾರ್ ಅವರು ಬದುಕಿದ್ದಾಗಲೂ ನಾನು ಪಕ್ಷದ ಪರವಾಗಿ ಪ್ರಚಾರ ಮಾಡಿದ್ದೇನೆ. ಈಗಲೂ ಅದನ್ನೇ ಮಾಡುತ್ತೇನೆ ಎಂದು ನಂತರ ತೇಜಸ್ವಿನಿ ಅನಂತ್ ಕುಮಾರ್ ಪ್ರತಿಕ್ರಿಯಿಸಿದ್ದರು.











Click it and Unblock the Notifications