ಖರ್ಗೆ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗೆ ವ್ಯಾಪಕ ಆಕ್ರೋಶ: ಎಚ್ಚೆತ್ತು ಕ್ಷಮೆ ಕೇಳಿದ ಆರಗ ಜ್ಞಾನೇಂದ್ರ

ಬೆಂಗಳೂರು, ಆಗಸ್ಟ್ 02: ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತು ಮಾತನಾಡುವಾಗ ಮಾಜಿ ಗೃಹ ಸಚಿವರಾದ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಎಚ್ಚೆತ್ತು ಇದೀಗ ಕ್ಷಮೆ ಕೇಳಿದ್ದಾರೆ.

ಕರ್ನಾಟಕದ ರಾಜ್ಯದ ಮಲೆನಾಡು ಪ್ರದೇಶದ ನಿವಾಸಿಗಳಿಗೆ ಮರಣ ಶಾಸನವಾಗಲಿರುವ ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತು ಆರಗ ಜ್ಞಾನೇಂದ್ರ ಮಾತನಾಡಿದರು. ಈ ವೇಳೆ ರಾಜ್ಯ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆಯವರ ಹೇಳಿಕೆ ವಿರುದ್ಧ ಮಾತನಾಡುವಾಗ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

BJP Araga Jnanendra Ask Apology For His Statement against Mallikarjun Kharge

ಈ ಕುರಿತು ಕ್ಷಮೆ ಕೋರಿ ಬುಧವಾರ ಟ್ವೀಟ್ ಮಾಡಿರುವ ಅವರು, ನನ್ನ ಸ್ವಕ್ಷೇತ್ರ ತೀರ್ಥಹಳ್ಳಿಯಲ್ಲಿ ನಿನ್ನೆ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿಅರಣ್ಯ ಸಚಿವ ಈಶ್ವರ್ ಖಂಡ್ರೆಯವರನ್ನು ಟೀಕಿಸುವ ಭರದಲ್ಲಿ, ಬೇರೆಯವರ ಹೆಸರು ತಪ್ಪಾಗಿ ಉಚ್ಚರಿಸಿದ್ದೇನೆ. ಇದಕ್ಕಾಗಿ ವಿಷಾದಿಸುತ್ತೇನೆ.

ರಾಷ್ಟ್ರ ರಾಜಕಾರಣದಲ್ಲಿ ಉಲ್ಲೇಖಾರ್ಹ ಸಾಧನೆ ಮಾಡಿರುವ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರ ಬಗ್ಗೆ ನನಗೆ ಅಪಾರ ಗೌರವ ಇದೆ. ನನ್ನ ಬಗ್ಗೆ ಅನ್ಯಥಾ ಭಾವಿಸಬಾರದು ಎಂದು ವಿನಂತಿಸುತ್ತೇನೆ ಎಂದು ಹೇಳುವ ಮೂಲಕ ಕ್ಷಮೆಯಾಚಿಸಿದ್ದಾರೆ.

ಆರಗ ಜ್ಞಾನೇಂದ್ರ ಹೇಳಿದ್ದೇನು?

ಕರ್ನಾಟಕ ಮಲೆನಾಡಿಗೆ ಸಂಬಂಧಿಸಿದಂತೆ ಇರುವ ಕೆ.ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಶಿವಮೊಗ್ಗದಲ್ಲಿ ಆಗಸ್ಟ್ 01ರಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ರವರ ಮೈಬಣ್ಣ ಕುರಿತು ಟೀಕಿಸಿದ್ದರು.

BJP Araga Jnanendra Ask Apology For His Statement against Mallikarjun Kharge

ಕಲ್ಯಾಣ ಕರ್ನಾಟಕ ಭಾಗದ ಬೀದರ್ ನ ಸಚಿವ ಈಶ್ವರ ಖಂಡ್ರೆ ಅವರನ್ನು ಗುರಿಯಾಗಿಸಿಕೊಂಡು ತಿರುಗೇಟು ನೀಡುವ ಭರದಲ್ಲಿ ಆರಗ ಜ್ಞಾನೇಂದ್ರ ಅವರು, ಬೀದರ್‌ನ ಜನರಿಗೆ ಮರಗಳು, ಗಿಡಗಳು ಅಥವಾ ನೆರಳಿನ ಬಗ್ಗೆ ಏನೂ ತಿಳಿದಿಲ್ಲವೆಂದರು.

ಪಶ್ಚಿಮ ಘಟ್ಟದ ಬಗ್ಗೆ ತಿಳಿದಿಲ್ಲ

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪಶ್ಚಿಮ ಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಬಗ್ಗೆ ಮಾಹಿತಿ ಇಲ್ಲ. ಅವರಿಗೆ ಮಲೆನಾಡು ಭಾಗದಲ್ಲಿ ಬದುಕುವವರ ಜೀವನ ಕ್ರಮ, ಪಶ್ಚಿಮ ಘಟ್ಟಗಳ ಭಾಗದ ಜನರ ಸಮಸ್ಯೆಗಳು ಕುರಿತು ತಿಳಿದಿಲ್ಲ. ಇನ್ನೂ ಪಶ್ಚಿಮ ಘಟ್ಟಗಳ ಕುರಿತು ವರದಿ ನೀಡಿರುವ ವಿಜ್ಞಾನಿ ಕಸ್ತೂರಿ ರಂಗನ್ ಅವರು ಪರಿಸರ ತಜ್ಞ ಅಲ್ಲ ಎಂದು ಹೇಳಿದ್ದರು.

ಈವರದಿ ಪಶ್ಚಿಮ ಘಟ್ಟಗಳ ಮಲೆನಾಡಿನ ಕುರಿತು ಇದೆ. ಇದರ ಬಗ್ಗೆ ಮಾತನಾಡಿದ್ದ ಈಶ್ವರ್ ಖಂಡ್ರೆ ಅವರು ಬಿಸಿಲ ನಾಡಿನವರು. ಹೀಗೆ ಹೋಲಿಕೆ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಅವರ ಮೈಬಣ್ಣ ಬಗ್ಗೆ ಆರಗ ಜ್ಞಾನೇಂದ್ರ ಮಾತನಾಡಿ ಇದೀಗ ಕ್ಷಮೆ ಕೇಳಿದರು.

ಆರಗ ವಿರುದ್ಧ ಕಾಂಗ್ರೆಸ್‌ ನಾಯಕರು ಕಿಡಿ

ಇನ್ನೂ ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಈಶ್ವರ್ ಖಂಡ್ರೆ ಅವರು, ಆರಗ ಜ್ಞಾನೇಂದ್ರ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅದಕ್ಕೆ ಹೀಗೆಲ್ಲ ಮಾತನಾಡಿದ್ದಾರೆ ಎಂದರು. ಇತ್ತ ಕೆಪಿಸಿಸಿ ಅಧ್ಯಕ್ಷರೂ ಡಿಸಿಎಂ ಡಿಕೆ ಶಿವಕುಮಾರ್ ಅವರು, ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಅವರು ಗುಡುಗಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+