ಸಿಎಂ ಆಗುವ ಉತ್ಸಾಹದ ಬೆನ್ನಲ್ಲೇ ಮತ್ತೆ ಹೆಸರು ಬದಲಿಸಿಕೊಂಡ ಯಡಿಯೂರಪ್ಪ?
Recommended Video
ಬೆಂಗಳೂರು, ಜುಲೈ 24: ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಮತ್ತೆ ಅಧಿಕಾರಕ್ಕೆ ಏರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪುನಃ ಹೆಸರು ಬದಲಿಸಿಕೊಂಡಿದ್ದಾರೆಯೇ?
2007ರ ನವೆಂಬರ್ನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಯಡಿಯೂರಪ್ಪ ಅವರು ತಮ್ಮ ಹೆಸರನ್ನು ಸಂಖ್ಯಾಶಾಸ್ತ್ರಕ್ಕೆ ಅನುಗುಣವಾಗಿ 'ಯಡ್ಯೂರಪ್ಪ' (Yeddyurappa) ಎಂದು ಬದಲಿಸಿಕೊಂಡಿದ್ದರು. ಇಂಗ್ಲಿಷ್ನಲ್ಲಿ ಅವರ ಹೆಸರು ಯಡ್ಯೂರಪ್ಪ ಎಂದಿದ್ದರೂ, ಕನ್ನಡದಲ್ಲಿ ಯಡಿಯೂರಪ್ಪ ಎಂದೇ ಬರೆಯಲಾಗುತ್ತಿತ್ತು. ತಮ್ಮ ಹೆಸರು ಬದಲಾವಣೆ ಬಗ್ಗೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.
ನಾಲ್ಕನೆಯ ಅವಧಿಗೆ ಮುಖ್ಯಮಂತ್ರಿ ಗಾದಿಗೆ ಏರಲು ಸನ್ನದ್ಧರಾಗಿರುವ ಅವರು ಪುನಃ ನಾಮಬದಲಾವಣೆ ಮಾಡಿಕೊಂಡಿರುವಂತೆ ಕಾಣಿಸುತ್ತಿದೆ. ಕುಮಾರಸ್ವಾಮಿ ಅವರ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ದೊರಕಿದೆ ಎಂದು ಅವರು ಅಮಿತ್ ಶಾ, ಜೆ.ಪಿ. ನಡ್ಡಾ ಸೇರಿದಂತೆ ರಾಷ್ಟ್ರನಾಯಕರಿಗೆ ಪತ್ರ ಬರೆದಿದ್ದರು.

ತಮ್ಮ ಅಧಿಕೃತ ಲೆಟರ್ಹೆಡ್ನಲ್ಲಿ ಅವರು ಪತ್ರ ಬರೆದಿದ್ದು, ಅದರಲ್ಲಿ ಅವರ ಹೆಸರು ಬಿ.ಎಸ್. ಯಡಿಯೂರಪ್ಪ (B.S. Yediyurappa) ಎಂದಿದೆ.
2006ರಲ್ಲಿ ಬಿಜೆಪಿ-ಜೆಡಿಎಸ್ 20-20 ಸರ್ಕಾರ ರಚನೆಯಾಗಿ 2007ರಲ್ಲಿ ಕುಮಾರಸ್ವಾಮಿ ಅವರು ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡದ ಕಾರಣ ಸರ್ಕಾರ ಪತನಗೊಂಡಿತ್ತು. ಅದರ ಬಳಿಕ ಯಡಿಯೂರಪ್ಪ ಅವರು ಸಂಖ್ಯಾಶಾಸ್ತ್ರಜ್ಞರನ್ನು ಭೇಟಿಯಾಗಿ ತಮ್ಮ ಹೆಸರನ್ನು ಅವರ ಸಲಹೆಯಂತೆ ಬದಲಿಸಿಕೊಂಡಿದ್ದರು.
-
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications