ಚುನಾವಣಾ ಆಯೋಗಕ್ಕೆ ಪತ್ರ ಬರೆದ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್: ಕಾರಣವೇನು?
ಬೆಂಗಳೂರು ಜೂನ್ 2: ಜೂನ್ 4ರಂದು ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ಸೋಲು ಗೆಲುವಿನ ಲೆಕ್ಕಾಚಾರಗಳು ಭಾರೀ ಕುತೂಹಲವನ್ನು ಮೂಡಿಸಿದ್ದು ಎಲ್ಲರ ಚಿತ್ತ ಮತ ಎಣಿಕೆಯತ್ತ ನಾಟಿದೆ. ಈ ನಡುವೆ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಒಂದು ಮಹತ್ವದ ಪತ್ರ ಬರೆದಿದ್ದಾರೆ.
ಮತ ಎಣಿಕೆ ದಿನ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳ ಎದೆಯಲ್ಲಿ ಡವಡವ ಶುರುವಾಗಿದೆ. ಮತ ಎಣಿಕೆ ವೇಳೆ ಲೋಪದೋಷಗಳಾಗಂತೆ ಚುನಾವಣೆ ಆಯೋಗ ಎಚ್ಚರಿಕೆ ವಹಿಸಿದ್ದರೂ ಅಭ್ಯರ್ಥಿಗಳಿಗೆ ತಳಮಳ ಶುರುವಾಗಿದೆ. ಹೀಗಾಗಿ ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಹೌದು... ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಲು ಮಾಜಿ ಪ್ರಧಾನಿ ಎಸ್‌ಡಿ ದೇವೇಗೌಡ ಅವರ ಅಳಿಯ ಮಂಜುನಾಥ್ ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಆದರೀಗ ಅದ್ಯಾಕೋ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಭಯ ಶುರುವಾದಂತೆ ತೋರುತ್ತಿದೆ. ಹೀಗಾಗಿ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದ್ರಾ ಅನ್ನೋ ಅನುಮಾನ ಕಾಡತೊಡಗಿದೆ. ಏಪ್ರಿಲ್ 26 ರಂದು ನಡೆದ ಮತಚಲಾವಣೆಯಲ್ಲಿ ಡಿಕೆ ಸುರೇಶ್ ಹಾಗೂ ಮಂಜುನಾಥ್ ನಡುವೆ ಜಿದ್ದಾಜಿದ್ದ ಏರ್ಪಟ್ಟಿದೆ. ಅಲ್ಲದೆ ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.
ಹೀಗಿದ್ದರೂ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸೂಕ್ತ ಭದ್ರತೆಯೊಂದಿಗೆ ಮತ ಎಣಿಕೆ ಮಾಡುವಂತೆ ಮನವಿ ಮಾಡಿದ್ದಾರೆ. ಹಾಗಾದರೆ ಮಂಜುನಾಥ್ ಅವರು ಬರೆದ ಪತ್ರದಲ್ಲಿ ಏನಿದೆ?
- ಮತ ಎಣಿಕೆ ಸಂದರ್ಭದಲ್ಲಿ ಹೆಚ್ಚಿನ ಭದ್ರತೆಯೋಮದಿಗೆ ಮತ ಎಣಿಕೆ ನಡೆಸಬೇಕು.
- ಮತ ಎಣಿಕೆ ಕೇಂದ್ರದ ಸುತ್ತಲು ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಬೇಕು.
- ಮತ ಎಣಿಕೆ ಕೇಂದ್ರದಲ್ಲಿ ಅಪರಿಚತ ವ್ಯಕ್ತಿಗಳು ಸುಳಿಯದಂತೆ ತಡೆಗಟ್ಟಲು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು.
- ಮತ ಎಣಿಕೆ ಯಾರೇ ಪ್ರವೇಶ ಮಾಡಿದರೂ ಅವರ ತಪಾಸಣ ಮಾಡಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು.
- ಅನುಮತಿ ಪಡೆದ ವ್ಯಕ್ತಿಗಳಿಗೆ ಮಾತ್ರ ಪ್ರವೇಶವಿರಲಿ. ಇನ್ನಿತರ ಅಧಿಕಾರಿಗಳು, ಮಾಧ್ಯಮ ಸಿಬ್ಬಂದಿ, ಏಜೆಂಟ್‌ಗಳನ್ನು ಮತ ಎಣಿಕೆ ಪ್ರದೇಶವನ್ನು ಪ್ರವೇಶಿಸದಂತೆ ಮಾಡಬೇಕು ಎಂದು ಪತ್ರದಲ್ಲಿ ಅವರು ಬರೆದಿದ್ದಾರೆ.
ಇಂತೆಲ್ಲಾ ವಿಚಾರಗಳೊಂದಿಗೆ ಚುನಾವಣಾ ಆಯೋಗಕ್ಕೆ ಮಂಜುನಾಥ್ ಮಹತ್ವದ ಪತ್ರವನ್ನು ಬರೆದಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಯಾರಿಗೆ ಮತದಾನ ಪ್ರಭು ಕೈ ಹಿಡಿಯುತ್ತಾರೆನ್ನುವುದು ಮಾತ್ರ ಭಾರೀ ಕುತೂಹಲ ಮೂಡಿಸಿದೆ.












Click it and Unblock the Notifications