ಬಗೆಹರಿದಿಲ್ಲ ಬಿಜೆಪಿಯ ಬೆಂಗಳೂರು ಉತ್ತರ ಸಮಸ್ಯೆ!
ಬೆಂಗಳೂರು, ಮಾ.4 : ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕಸರತ್ತು ಆರಂಭವಾಗಿದೆ. ಆದರೆ, ಬೆಂಗಳೂರು ಉತ್ತರ ಕ್ಷೇತ್ರದಿಂದ ಆರ್ ಅಶೋಕ್ ಅಥವ ಸದಾನಂದ ಗೌಡ ಇಬ್ಬರಲ್ಲಿ ಯಾರು ಅಭ್ಯರ್ಥಿ ಎಂಬ ಗೊಂದಲ ಬಗೆಹರಿದಿಲ್ಲ. ಬುಧವಾರ ಈ ಬಗ್ಗೆ ಉತ್ತರ ನೀಡುತ್ತೇವೆ ಎಂದು ಪಕ್ಷದ ನಾಯಕರು ಭರವಸೆ ನೀಡಿದ್ದಾರೆ.
ಮಂಗಳವಾರ ಮಧ್ಯಾಹ್ನ ಮಾಜಿ ಸಿಎಂ ಡಿವಿ ಸದಾನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಮತ್ತು ಮಾಜಿ ಡಿಸಿಎಂ ಆರ್ ಅಶೋಕ್ ಜಯನಗರದ ಅಶೋಕ್ ನಿವಾಸದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಬೆಂಗಳೂರು ಉತ್ತರದ ಅಭ್ಯರ್ಥಿ ಬಗ್ಗೆ ಬುಧವಾರ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ಅನಂತ್ ಕುಮಾರ್ ಹೇಳಿದರು. [ಉತ್ತರದ ಸ್ಪರ್ಧೆಯಿಂದ ಹಿಂದೆ ಸರಿದ ಅಶೋಕ್]
ಬುಧವಾರ ರಾಜ್ಯ ಚುನಾವಣಾ ಸಮತಿ ಸಭೆ ನಡೆಯಲಿದ್ದು, ಪಕ್ಷದ ಟ್ರಬಲ್ ಶೂಟರ್ ಖ್ಯಾತಿಯ ಅರುಣ್ ಜೇಟ್ಲಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ತಾವರ್ ಚಂದ್ ಗೇಹ್ಲೋಟ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಾಯಕರು ಭರವಸೆ ನೀಡಿದ್ದಾರೆ. ಸಭೆಯ ನಂತರ ನಾಯಕರು ಹೇಳಿದ್ದಿಷ್ಟು [ಡಿವಿಎಸ್ ಗೆ ಬೇಸರ ತಂದ ಬೆ.ಉತ್ತರ]

ಅರುಣ್ ಜೇಟ್ಲಿ ಹೆಗಲಿಗೆ ಹೊಣೆ
ಬುಧವಾರ ಬಿಜೆಪಿ ರಾಷ್ಟ್ರೀಯ ನಾಯಕ ಅರುಣ್ ಜೇಟ್ಲಿ ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಜೇಟ್ಲಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ತಾವರ್ ಚಂದ್ ಗೇಹ್ಲೋಟ್ ಬುಧವಾರ ನಡೆಯಲಿರುವ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಡಿವಿಎಸ್ ಹೇಳುವುದೇನು?
ಮಂಗಳವಾರ ಅಶೋಕ್ ಮನೆಯಲ್ಲಿ ನಡೆದ ಸಭೆಯ ಬಳಿ ಮಾತನಾಡಿದ ಮಾಜಿ ಸಿಎಂ ಡಿವಿ ಸದಾನಂದ ಗೌಡ, ಅಶೋಕ್ ಅವರಿಗೆ ಟಿಕೆಟ್ ನೀಡಿದರೆ, ಅವರಿಗೆ ನಾನು ಬೆಂಬಲ ನೀಡುತ್ತೇನೆ ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಸಭೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಹೇಳಿದರು.

ಅಶೋಕ್ ಹೇಳಿದ್ದು ಇಷ್ಟು
ತಮ್ಮ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಆರ್ ಅಶೋಕ್ ನನ್ನ ಸ್ಪರ್ಧೆಯ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿ ಬುಧವಾರ ಅಂತಿಮ ತೀರ್ಮಾನ ತಿಳಿಸುತ್ತೇನೆ. ಡಿವಿ ಸದಾನಂದ ಗೌಡರಿಗೆ ಪಕ್ಷದ ನಾಯಕರು ಟಿಕೆಟ್ ನೀಡಿದರೆ ಅವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದರು.

ಬುಧವಾರ ಅಂತಿಮ ನಿರ್ಧಾರ
ಅಶೋಕ್ ನಿವಾಸದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್, ಬುಧವಾರ ಬೆಂಗಳೂರು ಉತ್ತರದ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.












Click it and Unblock the Notifications