ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯದೇವ ಮಂಜುನಾಥ್ ಭರ್ಜರಿ ಪ್ರಚಾರ!
ಇಡೀ ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಜಯದೇವ ಆಸ್ಪತ್ರೆ ಮಾಜಿ ಮುಖ್ಯಸ್ಥ ಡಾ. ಮಂಜುನಾಥ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಸ್ಪರ್ಧೆ ಮಾಡಿರುವ, ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ. ಮಂಜುನಾಥ್ ಭರ್ಜರಿ ಪ್ರಚಾರ ನಡೆಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಆನೇಕಲ್ ಸುತ್ತಮುತ್ತಲ ಪ್ರದೇಶದಲ್ಲಿ ಡಾ. ಮಂಜುನಾಥ್ ಪ್ರಚಾರ ನಡೆಸಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ ಈ ಕಾರಣಕ್ಕೆ ಬಿಜೆಪಿ ನಾಯಕರೆಲ್ಲಾ ದಳಪತಿಗಳ ಬೆಂಬಲ ಪಡೆದು ಹಾಲಿ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಡಾ. ಮಂಜುನಾಥ್ ಅವರನ್ನ ಕಣಕ್ಕಿಳಿಸಿದ್ದಾರೆ. ಲೋಕಸಭೆ ಚುನಾವಣೆ 2024 ಮತದಾನದ ದಿನಾಂಕ ಘೋಷಣೆಯಾದ ನಂತರ ಕುತೂಹಲ ಡಬಲ್ ಆಗಿದೆ. ಅದ್ರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕುತೂಹಲದ ಕೇಂದ್ರ ಬಿಂದುವಾಗಿದೆ. ಇನ್ನು ಈ ಭಾಗದಲ್ಲಿ ಕಾಂಗ್ರೆಸ್ ಕಳೆದ ಹಲವು ವರ್ಷಗಳಿಂದ ಪ್ರಾಬಲ್ಯ ಹೊಂದಿದ್ದರೂ ಈ ಬಾರಿ ಗೆಲ್ಲುವ ವಿಶ್ವಾಸ ಬಿಜೆಪಿ & ಜೆಡಿಎಸ್ ಮೈತ್ರಿ ನಾಯಕರಿಗೆ ಇದೆ.

ಆನೇಕಲ್ ಭಾಗದಲ್ಲಿ ಭರ್ಜರಿ ಪ್ರಚಾರ
ಇನ್ನು ತಮ್ಮ ಪ್ರಚಾರ ಕಾರ್ಯದ ಕುರಿತಾಗಿ ಟ್ವೀಟ್ ಮಾಡಿರುವ ಡಾ. ಮಂಜುನಾಥ್ ಅವರು, 'ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಆನೇಕಲ್ ತಾಲೂಕಿನ ಶ್ರೀ ಬಂಡಿ ಮಹಾಕಾಳಿ ದೇವಸ್ಥಾನದ ಬಳಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಪಾಲ್ಗೊಂಡು, ಮತಯಾಚನೆ ಮಾಡಲಾಯಿತು. ಕೇಂದ್ರ ಸಚಿವರಾದ ಶ್ರೀ @ANarayana_swamy ಅವರು, ಜಿಡಿಎಸ್ ಮುಖಂಡರಾದ ಶ್ರೀ ರಂಗನಾಥ್ ಅವರು, ಹುಲ್ಲಹಳ್ಳಿ ಶ್ರೀನಿವಾಸ್ ಅವರು ಹಾಗೂ ಬಿಜೆಪಿ-ಜೆಡಿಎಸ್ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.' ಎಂದು ಮಾಹಿತಿ ನೀಡಿದ್ದಾರೆ.
ಸತತ 4 ಬಾರಿ ಡಿ.ಕೆ. ಸುರೇಶ್ ಗೆಲುವು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಕುತೂಹಲದ ಕೇಂದ್ರವಾಗಿದೆ. ಈಗ ಜಯ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಬೇಕು ಅನ್ನೋದು ಕಾಂಗ್ರೆಸ್ & ಬಿಜೆಪಿ ನಾಯಕರ ಗುರಿ. ಇಲ್ಲಿ ಸತತ 3 ಬಾರಿ ಗೆದ್ದಿರುವ ಡಿ.ಕೆ. ಸುರೇಶ್ ಅವರು ಈಗ ಮತ್ತೆ ಬೆಂಗಳೂರು ಗ್ರಾಮಾಂತರದ ಕ್ಷೇತ್ರದಿಂದ ಗೆದ್ದು ಬೀಗಿದರೆ 4ನೇ ಬಾರಿಗೆ ಗೆದ್ದಂತೆ ಆಗುತ್ತದೆ. ಈ ಮೂಲಕ ಸತತ 4 ಬಾರಿ ಗೆದ್ದ ಕೀರ್ತಿ ಡಿ.ಕೆ. ಸುರೇಶ್ ಅವರಿಗೆ ಸಲ್ಲುತ್ತದೆ. ಅಲ್ಲದೆ ಈ ಮೂಲಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ, ಹೊಸ ಇತಿಹಾಸ ನಿರ್ಮಾಣವಾಗುತ್ತದೆ. ಇದೇ ಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಂತ್ರ ರೂಪಸಿಯೆ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದಾರೆ.
ಕರ್ನಾಟಕದಲ್ಲಿ ಯಾವಾಗ ಚುನಾವಣೆ?
ಚುನಾವಣಾ ಆಯೋಗದ ಅಧಿಕಾರಿಗಳು ಘೋಷಣೆ ಮಾಡಿರುವ ಪ್ರಕಾರ, ಏಪ್ರಿಲ್ 26 ರಂದು & ಮೇ 7 ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದೆ. ಫಲಿತಾಂಶವು, ಜೂನ್ 4 ಕ್ಕೆ ಹೊರಬೀಳಲಿದೆ. ಈ ಮೂಲಕ, ಇಡೀ ಪ್ರಪಂಚದ ಗಮನ ಸೆಳೆದಿರುವ. ಭಾರತದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ತಲುಪುತ್ತಿದೆ. ಹೀಗಾಗಿ ಮುಂದೆ ಏನಾಗುತ್ತೆ? ಮತದಾರ ಪ್ರಭು ಯಾರ ಪರ ನಿಲ್ಲುತ್ತಾನೆ? ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications