ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಚಿತ ಸೆಟ್ ಟಾಪ್ ಬಾಕ್ಸ್; 6 ತಿಂಗಳು ಉಚಿತ ಕೇಬಲ್ ಪ್ರಸಾರ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 26: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಹೊಸ ಆರೋಪ ಕೇಳಿ ಬಂದಿದೆ. ಮನೆಗಳಿಗೆ ಉಚಿತವಾಗಿ ಸೆಟ್ ಟಾಪ್ ಬಾಕ್ಸ್‌ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ನೀಡಿದೆ. ಸೆಟ್ ಟಾಪ್ ಬಾಕ್ಸ್‌ಗಳನ್ನು ವಿತರಣೆ ಮಾಡುತ್ತಿರುವ ವಿಡಿಯೋ ಸಾಕ್ಷಿಗಳನ್ನು ನೀಡಿದೆ.

ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ಅನರ್ಹಗೊಳಿಸಲು ದೂರುಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ಅನರ್ಹಗೊಳಿಸಲು ದೂರು

BJP Candidate Offering Free Set Of Box Says Congress

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭಾವಚಿತ್ರ ಹಾಕಿ ಸೆಟ್ ಟಾಪ್ ಬಾಕ್ಸ್‌ ಕೊಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದ್ದಾರೆ.

ಆರ್. ಆರ್. ನಗರ ಚುನಾವಣೆ; ಸೈಬರ್‌ ಕ್ರೈಂಗೆ ಜೆಡಿಎಸ್ ದೂರು ಆರ್. ಆರ್. ನಗರ ಚುನಾವಣೆ; ಸೈಬರ್‌ ಕ್ರೈಂಗೆ ಜೆಡಿಎಸ್ ದೂರು

ಮನೆಗಳಿಗೆ ಉಚಿತವಾಗಿ ಸೆಟ್ ಟಾಪ್ ಬಾಕ್ಸ್‌ಗಳನ್ನು ವಿತರಣೆ ಮಾಡಲಾಗುತ್ತಿದೆ. ಅದರಲ್ಲಿ ಅಭ್ಯರ್ಥಿ ಫೋಟೋ ಗೋಚರಿಸುವಂತೆ ಮಾಡಲಾಗಿದೆ. 6 ತಿಂಗಳು ಉಚಿತ ಕೇಬಲ್ ಪ್ರಸಾರ ಮಾಡಿ ಮತದಾರರಿಗೆ ಆಮಿಷವೊಡ್ಡಲಾಗುತ್ತಿದೆ ಎಂದು ಕಾಂಗ್ರೆಸ್‌ ದೂರಿದೆ.

ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ನಾಮಪತ್ರ ವಾಪಸ್! ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ನಾಮಪತ್ರ ವಾಪಸ್!

"ಇದು ನನ್ನ ಬ್ಯುಸಿನೆಸ್ ಹೀಗಾಗಿ ನಾನು ಈ ಕೆಲಸ ಮಾಡುತ್ತಿದ್ದೇನೆ" ಎಂದು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ. ಚುನಾವಣಾ ಆಯೋಗ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಅನರ್ಹಗೊಳಿಸಲು ದೂರು : ಕೆಪಿಸಿಸಿ ಮುನಿರತ್ನ ವಿರುದ್ಧ ಕಳೆದ ವಾರ ಸಹ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮುನಿರತ್ನ ಅಕ್ರಮವಾಗಿ ಮತದಾರರ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ. ತಲಾ 5 ಸಾವಿರ ರೂ. ನೀಡಿ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ದೂರು ನೀಡಿದ್ದರು.

Recommended Video

ಇನ್ನೂ ಜಾಸ್ತಿ ಆಗತ್ತೆ ಈರುಳ್ಳಿ ಬೆಲೆ | Indian Onion is stronger than American Dollar | Oneindia Kannada

ನವೆಂಬರ್ 3ರಂದು ಆರ್. ಆರ್. ನಗರ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್‌ನಿಂದ ಹೆಚ್. ಕುಸುಮಾ, ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಅಭ್ಯರ್ಥಿಗಳು.

English summary
KPCC writes to chief election commissioner seeking action against BJP's RR Nagar assembly by-poll candidate Munirathna. Congress alleged that candidate offering free set of box for people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X