ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿಜೆಪಿ ಅಭ್ಯರ್ಥಿ ಸುಧಾಕರ್

|
Google Oneindia Kannada News

ಬೆಂಗಳೂರು, ನವೆಂಬರ್ 23: ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಮುಖವಾಡ ಕಳಚುತ್ತಿದೆ, ಕರ್ನಾಟಕದಲ್ಲಿ ಒಮ್ಮೆ ಕಳಚಿತ್ತು ಈಗ ಮಹಾರಾಷ್ಟ್ರದ ಸರದಿ, ಅಲ್ಪಸಂಖ್ಯಾತರು , ಶೋಷಿತರ ಮೇಲೆ ಕಾಂಗ್ರೆಸ್‌ಗೆ ಇದ್ದ ಬದ್ಧತೆ ಇದೇನಾ, ಕಾಂಗ್ರೆಸ್ ಶೀಘ್ರ ಇತಿಹಾಸಪುಟ ಸೇರಲಿದೆ ಎಂದರು.

ಮಹಾರಾಷ್ಟ್ರ ರಾಜಕೀಯ ಪ್ರಹಸನದಲ್ಲಿ ಕೊನೆಗೆ ಗೆದ್ದಿದ್ದು ಕಾಂಗ್ರೆಸ್!ಮಹಾರಾಷ್ಟ್ರ ರಾಜಕೀಯ ಪ್ರಹಸನದಲ್ಲಿ ಕೊನೆಗೆ ಗೆದ್ದಿದ್ದು ಕಾಂಗ್ರೆಸ್!

ಮಹಾರಾಷ್ಟ್ರದಲ್ಲಿ ಮರಾಠಿಗರ ಭಾವನೆಗಳಿಗೆ ಬೆಲೆಕೊಟ್ಟು ಎನ್‌ಸಿಪಿ ಬಿಜೆಪಿಗೆ ಬೆಂಬಲ ನೀಡಿದೆ. ಬಿಜೆಪಿಯನ್ನು ಕೋಮುವಾದಿ ಪಕ್ಷವೆಂದು ದೂಷಿಸುತ್ತಿದ್ದ ಕಾಂಗ್ರೆಸಿಗರು ಅಧಿಕಾರಕ್ಕಾಗಿ ಶಿವಸೇನೆಯ ಜತೆಯೇ ಹೋದರು. ದಲಿತರು ಶೋಷಿತರು ಎಂದು ಅಭಿವೃದ್ಧಿ ಹೆಸರಲ್ಲಿ ಏಳು ದಶಕಗಳ ಕಾಲ ಕಾಂಗ್ರೆಸ್ ಆಡಳಿತ ಮಾಡಿತ್ತು ಎಂದು ಆರೋಪಿಸಿದರು.

BJP Candidate Sudhakar outrage against Congress

ರಾತ್ರೋರಾತ್ರಿ ಮಹಾರಾಷ್ಟ್ರ ರಾಜಕೀಯ ಚಿತ್ರಣ ಸಂಪೂರ್ಣವಾಗಿ ಬದಲಾಗಿದೆ. ಎನ್‌ಸಿಪಿ, ಕಾಂಗ್ರೆಸ್, ಶಿವಸೇನಾ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕು ಎಂದು ಕನಸು ಕಾಣುತ್ತಿದ್ದರೆ ಇತ್ತ ಬಿಜೆಪಿ ಹಾಗೂ ಎನ್‌ಸಿಪಿಯ ಅಜಿತ್ ಪವಾರ್ ಸೇರಿ ಸರ್ಕಾರ ರಚನೆ ಮಾಡಿದ್ದಾರೆ.

ಇಷ್ಟಾದರೂ ಎನ್‌ಸಿಪಿ ಹಾಗೂ ಶಿವಸೇನಾ ಹಾಗೂ ಕಾಂಗ್ರೆಸ್ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡುವ ಭರವಸೆ ಹೊಂದಿದ್ದಾರೆ.

English summary
BJP candidate Sudhakar has made outrage against the Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X