ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿಗೆ ಜೈ ಅಂದವರ ಮೇಲೆ ಹಲ್ಲೆ: ಬಿಜೆಪಿಯಿಂದ ಕಮೀಷನರ್‌ಗೆ ದೂರು

|
Google Oneindia Kannada News

ಬೆಂಗಳೂರು, ಮಾರ್ಚ್‌ 19: ನಿನ್ನೆ (ಮಾರ್ಚ್ 18) ರಂದು ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ನಡೆದ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮದ ವೇಳೆ ಹೊರಗೆ ಮೋದಿ ಘೋಷಣೆಗಳನ್ನು ಕೂಗಿದವರ ಮೇಲೆ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು ಇಂದು ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಅವರು ನಿನ್ನೆ ಸಂವಾದ ಸ್ಥಳಕ್ಕೆ ಆಗಮಿಸುವ ಸಂದರ್ಭದಲ್ಲಿ ಮೋದಿ ಬೆಂಬಲಿಗರು, 'ಮೋದಿ, ಮೊದಿ' ಘೋಷಣೆ ಕೂಗಿ ರಾಹುಲ್ ಗಾಂಧಿಗೆ ಮುಜುಗರ ಉಂಟು ಮಾಡಿದರು. ಕಾಂಗ್ರೆಸ್‌ನ ಕಾರ್ಯಕರ್ತರೂ ಸಹ 'ಚೌಕೀದಾರ್ ಚೋರ್ ಹೇ' ಎಂದು ಅವರೊಂದಿಗೆ ವಾಗ್ವಾದಕ್ಕೆ ನಿಂತರು.

ರಾಹುಲ್ ಸಂವಾದ ಕಾರ್ಯಕ್ರಮದ ಹೊರಗೆ ಕೈ-ಬಿಜೆಪಿ ಕಾರ್ಯಕರ್ತರ ಗಲಾಟೆರಾಹುಲ್ ಸಂವಾದ ಕಾರ್ಯಕ್ರಮದ ಹೊರಗೆ ಕೈ-ಬಿಜೆಪಿ ಕಾರ್ಯಕರ್ತರ ಗಲಾಟೆ

ಈ ಸಮಯ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಮೋದಿ ಘೋಷಣೆಗಳನ್ನು ಕೂಗುತ್ತಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

BJP complaints against police who miss handled techies

ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು, ಇಂದು ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ ಸುನಿಲ್ ಕುಮಾರ್ ಅವರನ್ನು ಭೇಟಿಯಾಗಿ ಈ ಬಗ್ಗೆ ದೂರು ಸಲ್ಲಿಸಿದರು.

ಮೋದಿ ಬೆಂಬಲಿಗರನ್ನು ಬಂಧಿಸಿದ ಕಾಂಗ್ರೆಸ್‌ ವಿರುದ್ಧ ಅಮಿತ್ ಶಾ ವಾಗ್ದಾಳಿಮೋದಿ ಬೆಂಬಲಿಗರನ್ನು ಬಂಧಿಸಿದ ಕಾಂಗ್ರೆಸ್‌ ವಿರುದ್ಧ ಅಮಿತ್ ಶಾ ವಾಗ್ದಾಳಿ

ದೂರಿನಲ್ಲಿ, ರಾಹುಲ್ ಗಾಂಧಿ ಅವರು ಕರ್ನಾಟಕ ಪೊಲೀಸರನ್ನು ಬಳಸಿಕೊಂಡು ವಿರೋಧಿಗಳ ದನಿಯನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಟೆಕಿಗಳನ್ನು ಬಂಧಿಸಿರುವ ಪೊಲೀಸರ ಕ್ರಮ ಕಾನೂನು ಬಾಹಿರ ಎಂದು ಸಹ ದೂರಿನಲ್ಲಿ ತಿಳಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ರಾಹುಲ್, ಸಿದ್ದರಾಮಯ್ಯ ರಹಸ್ಯ ಮಾತುಕತೆ!ವಿಮಾನ ನಿಲ್ದಾಣದಲ್ಲಿ ರಾಹುಲ್, ಸಿದ್ದರಾಮಯ್ಯ ರಹಸ್ಯ ಮಾತುಕತೆ!

ದೂರಿನಲ್ಲಿ ಬೆಂಗಳೂರು ಪೊಲೀಸರ ವರ್ತನೆ ಬಗ್ಗೆ ಅಸಮಾಧಾನವನ್ನು ಬಿಜೆಪಿ ವ್ಯಕ್ತಪಡಿಸಿದ್ದು, ಟೆಕಿಗಳ ಮೇಲೆ ಲಾಠಿ ಬೀಸಿದ ಹಾಗೂ ಅವರನ್ನು ಬಂಧಿಸಿದವರ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯಿಸಿದೆ.

English summary
BJP complaint to Bengaluru police commissioner about yesterday's police beating techies who chant Modi slogans near Rahul Gandhi's program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X