ಆರ್. ಆರ್. ನಗರ; ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ

ಬೆಂಗಳೂರು, ನವೆಂಬರ್ 03: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡ ಘಟನೆಯೂ ನಡೆದಿದೆ.

ಆರ್. ಆರ್. ನಗರ ವ್ಯಾಪ್ತಿಯ ಕ್ಲಾರೆಂಟ್ ಶಾಲೆ ಮತಗಟ್ಟೆ ಸಮೀಪ ಟೇಬಲ್ ಹಾಕುವ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಜಾಲಹಳ್ಳಿ ಸಮೀಪದಲ್ಲಿ ಈ ಮತಗಟ್ಟೆ ಇದೆ.

ಗಲಾಟೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮತಗಟ್ಟೆಯಲ್ಲಿ ಮತದಾನ ಮಾಡಲು ಯಾವುದೇ ತೊಂದರೆ ಆಗದಂತೆ ನೋಡಿಕೊಂಡರು. ಜನರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

BJP Congress Workers Clash Near Jalahalli

ಮತದಾರರರಿಗೆ ಸ್ಲಿಪ್ ನೀಡಲು ರಾಜಕೀಯ ಪಕ್ಷಗಳು ಮತಗಟ್ಟೆ ಬಳಿ ಟೇಬಲ್ ಹಾಕುತ್ತಿದ್ದವು. ಈ ಸಮಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಆರ್. ಅರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹೆಚ್. ಕುಸುಮಾ, ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಗಳಾಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+