ನವೆಂಬರ್ 29ರಂದು ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು, ನವೆಂಬರ್ 28: ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಶಾಸಕಾಂಗ ಸಭೆ ನವೆಂಬರ್ 29ರಂದು ಗುರುವಾರ ನಡೆಯಲಿದೆ.

ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು, ಬೆಳಗಾವಿ ಅಧಿವೇಶನದಲ್ಲಿ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪೂರಕವಾಗಿ ನಡೆಸಬೇಕಾದಂತಹ ಕ್ರಮ ಹಾಗೂ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಗುರುವಾರ ಬೆಳಗ್ಗೆ ಅಥವಾ ಮಧ್ಯಾಹ್ನ ಕೋರ್ ಕಮಿಟಿ ಸಭೆ ನಡೆಯಲಿದೆ. ಸಂಜೆ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಆಯೋಜನೆಯಾಗಿರುವ ಕೇಂದ್ರದ ಮಾಜಿ ಸಚಿವ ಅನಂತ ಕುಮಾರ್ ಆವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

BJP core commitee meeting Tomorrow

ಕೋರ್ ಕಮಿಟಿ ಸಭೆಯಲ್ಲಿ ಬಳ್ಳಾರಿ ಲೋಕಸಭೆ ಹಾಗೂ ಜಮಖಂಡಿ ವಿಧಾನಸಭೆ ಉಪ ಚುನಾವಣೆಯಲ್ಲಿ ಸೋಲು, ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದವರು ಮತದಾನಕ್ಕೂ ಮೊದಲೇ ಸ್ಪರ್ಧೆಯಿಂದ ನಿವೃತ್ತಿ ಪಡೆದ ಬಗ್ಗೆ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ. ಸೋಲಿನ ಹೊಣೆ, ಆರೋಪ-ಪ್ರತ್ಯಾರೋಪಗಳ ಬದಲಿಗೆ ಸೋಲಿಗೆ ಕಾರಣವಾದ ಅಂಶಗಳನ್ನು ಗುರುತಿಸಿ ಸರಿಪಡಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೆಚ್ಚು ಚರ್ಚೆ ನಡೆಸಲು ನಾಯಕರು ಚಿಂತಿಸಿದಂತಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಸಂಘಟನೆ ದುರ್ಬಲವಾಗಿರುವ ಕಡೆಗಳಲ್ಲಿ ಬಲವರ್ಧನೆಗಾಗಿ ಅನುಸರಿಸಬೇಕಾದ ಕ್ರಮಗಳು ಸೇರಿ ಇತರೆ ವಿಚಾರಗಳ ಬಗ್ಗೆಯೂ ಮಾತುಕತೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+