ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲ್ಲ ಅನರ್ಹ ಶಾಸಕರಿಗೂ ಟಿಕೆಟ್: ಬಿಜೆಪಿ ಸಭೆಯಲ್ಲಿ ತೀರ್ಮಾನ

|
Google Oneindia Kannada News

Recommended Video

17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ | Oneindia Kannada

ಬೆಂಗಳೂರು, ನವೆಂಬರ್ 13: ಸಮ್ಮಿಶ್ರ ಸರ್ಕಾರ ಉರುಳಿಸಿ ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಎಲ್ಲ ಶಾಸಕರಿಗೂ ಮುಂಬರುವ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ.

ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಬುಧವಾರ ತೀರ್ಪು ನೀಡಿದ ಬೆನ್ನಲ್ಲೇ ಬಿಜೆಪಿ ಕೋರ್ ಕಮಿಟ ಸಭೆ ಆಯೋಜಿಸಿತ್ತು. ಅದರಲ್ಲಿ ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇಳಿಸುವ ಬಗ್ಗೆ ಚರ್ಚಿಲಾಯಿತು. 17 ಶಾಸಕರು ರಾಜೀನಾಮೆ ನೀಡಿದ್ದರಿಂದ ಅನರ್ಹಗೊಂಡಿದ್ದರು. 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.

17 ಅನರ್ಹ ಶಾಸಕರಲ್ಲಿ ಒಬ್ಬರಿಗೆ ಮಾತ್ರ ಬಿಜೆಪಿ ಬಾಗಿಲು ಬಂದ್: ಆಗ ಅನರ್ಹ, ಈಗ ಅತಂತ್ರ!17 ಅನರ್ಹ ಶಾಸಕರಲ್ಲಿ ಒಬ್ಬರಿಗೆ ಮಾತ್ರ ಬಿಜೆಪಿ ಬಾಗಿಲು ಬಂದ್: ಆಗ ಅನರ್ಹ, ಈಗ ಅತಂತ್ರ!

ಅನರ್ಹಗೊಂಡ 17 ಶಾಸಕರ ಪೈಕಿ ರೋಷನ್ ಬೇಗ್ ಹೊರತುಪಡಿಸಿ ಉಳಿದ ಎಲ್ಲರೂ ಗುರುವಾರ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ. ಮಸ್ಕಿ ಮತ್ತು ಆರ್‌ಆರ್ ನಗರ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿಲ್ಲ. ಉಳಿದಂತೆ 15 ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೇ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ. ಆದರೆ ಶಿವಾಜಿನಗರ ಕ್ಷೇತ್ರದ ಅನರ್ಹ ಶಾಸಕ ರೋಷನ್ ಬೇಗ್ ಅವರು ಗುರುವಾರದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರುತ್ತಿಲ್ಲ. ಹೀಗಾಗಿ ಇಲ್ಲಿ ಬಿಜೆಪಿ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆಯೇ ಅಥವಾ ರೋಷನ್ ಬೇಗ್ ಅವರನ್ನು ಬಳಿಕ ಪಕ್ಷಕ್ಕೆ ಸೇರಿಸಿಕೊಂಡು ಅವರಿಗೇ ಟಿಕೆಟ್ ನೀಡಲಿದೆಯೇ ಎಂಬುದು ಖಚಿತವಾಗಿಲ್ಲ.

BJP Core Committee Has Decided To Give Tickets For All Disqualified MLAs

ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಲಿಂಬಾವಳಿ ನೇತೃತ್ವ ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಲಿಂಬಾವಳಿ ನೇತೃತ್ವ

ಉಪ ಚುನಾವಣೆ ನಡೆಯುವ 15 ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ಕೂಡ ನೇಮಿಸಲಾಗಿದೆ. ಬೇರೆ ಪಕ್ಷದಿಂದ ಂದ ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದರಿಂದ ಆಯಾ ಕ್ಷೇತ್ರಗಳಲ್ಲಿ ಸ್ಥಳೀಯ ಮುಖಂಡರು ಬಂಡಾಯ ಏಳುವ ಸಾಧ್ಯತೆ ಇದೆ. ಅದನ್ನು ನಿಯಂತ್ರಿಸಲು ಯಾವ ನಡೆ ಅನುಸರಿಸಬೇಕು ಎಂಬ ಬಗ್ಗೆ ಕೂಡ ಸಭೆಯಲ್ಲಿ ಚರ್ಚಿಸಲಾಯಿತು.

English summary
BJP in its core committee meeting has decided to give tickets in by elections to all disqualified MLAs who are going to join the party on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X