ಕಾಂಗ್ರೆಸ್ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು, ಮಾರ್ಚ್ 14: ಚುನಾವಣೆಯಲ್ಲಿ ಪರೋಕ್ಷ ಸಹಾಯ ಪಡೆಯಲೆಂದೇ ಕಾನೂನು ಬಾಹಿರವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.

ಬೆಂಗಳೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ದಯಾನಂದ್.ಕೆ.ಎ. ಅವರು ಐಎಎಸ್ ಪದೋನ್ನತಿ ಹೊಂದಿ ಕೇವಲ 12 ದಿನಗಳು ಮಾತ್ರ ಆಗಿದ್ದು ಅವರನ್ನು ಬೆಂಗಳೂರಿಗೆ ಬೇಕೆಂತಲೇ ನೇಮಕ ಮಾಡಿಕೊಳ್ಳಲಾಗಿದೆ. ಹೊಸ ಜಿಲ್ಲಾಧಿಕಾರಿಗಳು ಸಿದ್ದರಾಮಯ್ಯ ಅವರ ಆಪ್ತರಾಗಿದ್ದು, ಕಾಂಗ್ರೆಸ್‌ನ ಅಣತಿಯಂತೆ ಕೆಲಸ ಮಾಡುತ್ತಾರೆಂಬ ಉದ್ದೇಶದಿಂದಲೇ ಹೀಗೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ನಿಯಮದ ಪ್ರಕಾರ ಐಎಎಸ್‌ ಬಡ್ತಿ ಹೊಂದಿದ ಅಧಿಕಾರಿಗಳನ್ನು ಕೆಲ ಕಾಲ ವಿವಿಧ ಇಲಾಖೆಯಲ್ಲಿ ಕೆಲಸ ಮಾಡಿದ ನಂತರವಷ್ಟೆ ಜಿಲ್ಲಾಧಿಕಾರಿಯಾಗಿ ನೇಮಿಸಬೇಕು ಆದರೆ ಕಾಂಗ್ರೆಸ್ ಸರ್ಕಾರವು ತನ್ನ ಲಾಭಕ್ಕಾಗಿ ನಿಯಮವನ್ನು ಗಾಳಿಗೆ ತೂರಿದೆ ಎಂದು ಬಿಜೆಪಿ ಪರ ವಕ್ತಾರ ಎನ್.ಆರ್.ರಮೇಶ್ ದೂರಿದ್ದಾರೆ.

BJP gives complaint against congress to election commission

ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳನ್ನು ಕಾಂಗ್ರೆಸ್‌ ವಕ್ತಾರರಂತೆ ಬಳಸಿಕೊಳ್ಳಲಾಗುತ್ತಿದೆ. ಕಾಂಗ್ರೆಸ್‌ ರಾಜಕಾರಣಿಗಳಿಗೆ ಭ್ರಷ್ಟಾಚಾರಕ್ಕೆ ಸಹಕರಿಸದ ಅಧಿಕಾರಿಗಳಿಗೆ ಕಿರುಕುಳ ನೀಡಲಾಗಿದೆ, ಎತ್ತಂಗಡಿ ಭಾಗ್ಯಗಳನ್ನು ಕಲ್ಪಿಸಲಾಗಿದೆ ಎಂದು ಅವರು ಆರೋಪಿಸಿದರು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಈ ಹಿಂದಿನ ಜಿಲ್ಲಾಧಿಕಾರಿ ಡಿ.ಶಂಕರ್ ಅವರ ಸ್ಥಾನಕ್ಕೆ ಹೊಸ ಜಿಲ್ಲಾಧಿಕಾರಿಯಾಗಿ ದಯಾನಂದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ವಿ.ಶಂಕರ್‌ ಅವರಿಗೆ ಇನ್ಣೂ ಯಾವ ಹುದ್ದೆಯನ್ನೂ ಸೂಚಿಸಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+