ಬೆಡ್ ಮಾಫಿಯಾ: "ಪ್ಲೀಸ್ ನಾಟಕ ಆಡುವುದನ್ನು ಬಿಟ್ಟು ಕೆಲಸ ಮಾಡಿ"

ಬೆಂಗಳೂರು, ಮೇ 04: ಕೊವಿಡ್-19 ರೋಗಿಗಳಿಗೆ ಹಾಸಿಗೆ ನೀಡುವ ವಿಚಾರದಲ್ಲೂ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರವು ಬಿಬಿಎಂಪಿ ಮತ್ತು ಅಧಿಕಾರಿಗಳ ವಿರುದ್ಧ ಬೊಟ್ಟು ಮಾಡುತ್ತಿರುವುದು ಏಕೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಬೈರೇಗೌಡ ಪ್ರಶ್ನೆ ಮಾಡಿದ್ದಾರೆ.

"ಇಂದು ಬಿಜೆಪಿ ಸಂಸದರು ಹಾಗೂ ಶಾಸಕರು ತಮ್ಮ ವೈಫಲ್ಯಕ್ಕೆ ಬಿಬಿಎಂಪಿ ಅಧಿಕಾರಿಗಳನ್ನು ದೂರುತ್ತಿರುವುದಕ್ಕೆ ಎರಡು ಕಾರಣಗಳನ್ನು ನೀಡಿದ್ದಾರೆ. ಒಂದು ಬಿಜೆಪಿ ಸರ್ಕಾರಕ್ಕೆ ತನ್ನದೇ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಮೇಲೆ ನಿಯಂತ್ರಣ ಹೊಂದುವುದಕ್ಕೆ ಸಾಧ್ಯವಾಗಿಲ್ಲವೇ" ಎಂದು ಪ್ರಶ್ನಿಸಿದ್ದಾರೆ.

ಎರಡನೆಯದಾಗಿ, "ಬಿಜೆಪಿಯು ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ಹಾಗೂ ಸರ್ಕಾರದ ವೈಫಲ್ಯದಿಂದ ಜನರ ಲಕ್ಷ್ಯವನ್ನು ಬೇರೆಡೆ ಸೆಳೆಯುವುದಕ್ಕೆ ಅಧಿಕಾರಿಗಳ ವಿರುದ್ಧ ದೂರುತ್ತಿದ್ದೀರಾ" ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಬೈರೇಗೌಡ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

BJP Govt Is Not In Control Of Its Own Officers And Administration, Krishna Byre Gowda


ನಾಟಕವನ್ನು ಬಿಟ್ಟು ಕೆಲಸ ಮಾಡಿ:

"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಜನರು ಹಾಸಿಗೆಗಳು ಸಿಗದೇ ನರಕಯಾತನೆ ಅನುಭವಿಸುತ್ತಿದ್ದಾರೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ದಯವಿಟ್ಟು ನಾಟಕ ಆಡುವುದನ್ನು ಬಿಟ್ಟು ಅಗತ್ಯವಿರುವ ರೋಗಿಗಳಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸುವ ಕೆಲಸವನ್ನು ಮಾಡಿರಿ" ಎಂದು ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದಾರೆ.

ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಹಾಸಿಗೆ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿ ಅವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+