ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನರ್ಹರಿಗೆ ಬಿಜೆಪಿಯಿಂದ 'ಅದ್ಧೂರಿ' ಸ್ವಾಗತ

|
Google Oneindia Kannada News

ಬೆಂಗಳೂರು, ನವೆಂಬರ್,14: ಅಂತೂ ಅಧಿಕೃತವಾಗಿ ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಭವ್ಯ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕ ನಂತರ ಬಹುತೇಕ ಅನರ್ಹ ಶಾಸಕರು ಬಿಜೆಪಿ ಸೆರುತ್ತಿದ್ದಾರೆ.

ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ, ರಮೇಶ ಜಾರಕಿಹೊಳಿ, ಮುನಿರತ್ನ, ಆನಂದ್ ಸಿಂಗ್, ಹೆಚ್.ವಿಶ್ವನಾಥ್, ಮಹೇಶ ಕುಮಟಳ್ಳಿ, ಪ್ರತಾಪ್ ಗೌಡ ಪಾಟೀಲ್, ಹೆಚ್,ಸುಧಾಕರ್, ಶಿವರಾಮ್ ಹೆಬ್ಬಾರ್, ಶ್ರೀಮಂತ್ ಪಾಟೀಲ್, ಎಂಟಿಬಿ ನಾಗರಾಜ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಮತ್ತು ಆರ್.ಶಂಕರ್ ಇಂದು ಬಿಜೆಪಿ ಪಕ್ಷಕ್ಕೆ ಅಧೀಕೃತವಾಗಿ ಸೇರುತ್ತಿದ್ದಾರೆ.

ಅನರ್ಹ ಶಾಸಕರನ್ನು ಬರಮಾಡಿಕೊಳ್ಳಲು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಸಚಿವರಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಸಿ.ಪಿ.ಯೋಗೇಶ್ವರ್ ಸೇರಿದಂತೆ ರಾಜ್ಯ ಬಿಜೆಪಿ ಮುಖಂಡರುಗಳು ಪಾಲ್ಗೊಳ್ಳುತ್ತಿದ್ದಾರೆ.

ಸಾವಿರಾರು ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಅನರ್ಹ ಶಾಸಕರು ಕಮಲ ಮುಡಿಯಲಿದ್ದಾರೆ. ಇವರನ್ನು ಸ್ವಾಗತಿಸಲು ಸರ್ವ ತಯಾರಿ ಮಾಡಲಾಗಿದೆ.

BJP Grand Welcomes by Disqualifiers

ಬಿಎಸ್ ವೈಗೆ ಶುರುವಾಗುತ್ತಾ ಹೊಸ ತಲೆನೋವು
ಅನರ್ಹ ಶಾಸಕರ ಬಿಜೆಪಿ ಸೇರ್ಪಡೆಯಿಂದ ಮೂಲ ಬಿಜೆಪಿಗರ ಕೆಂಗಣ್ಣಿಗೆ ಯಡಿಯೂರಪ್ಪ ಗುರಿಯಾಗುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿದೆ.

ಅದೇ ರೀತಿ ಕಳೆದ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳನ್ನು ಹೇಗೆ ಸಮಾಧಾನ ಪಡಿಸಬೇಕೆಂಬ ಚಿಂತೆ ಯಡಿಯೂರಪ್ಪ ಅವರನ್ನು ಮತ್ತಷ್ಟು ಕಿಗ್ಗಿಸಿದೆ.

English summary
The BJP Is Preparing to Welcome Disqualified MLAs To The Party. A Grand Platform Has Been Created In Front of the BJP Office in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X