'ಮುಡಾ' ಬದಲಿ ಸೈಟ್ ಹಂಚಿಕೆ ನೀತಿ ಮಾಡಿದ್ದೇ ಬಿಜೆಪಿ: ಎಂಬಿ ಪಾಟೀಲ್
ಬೆಂಗಳೂರು, ಜುಲೈ 31: ರಾಜ್ಯ ರಾಜಕೀಯದಲ್ಲಿ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿರುವ ಮುಡಾ ಹಗರಣ ಮತ್ತು ವಾಲ್ಮಿಕಿ ಹಗರಣ, ತನಿಖೆ ವಿಚಾರಗಳು ಹೊಸ ಹೊಸ ರೂಪ ಪಡೆದುಕೊಳ್ಳುತ್ತಿವೆ. ಇದೀಗ ಈ ವಿಚಾರ ಕುರಿತು ಮಾತನಾಡಿರುವ ಕೈಗರಿಕೆ ಸಚಿವ ಎಂಬಿ ಪಾಟೀಲ್ ಅವರು, ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು ಎಂದು ಹೇಳಿದ್ದಾರೆ.
ಕೆಲವು ವಿಚಾರಗಳ ಕುರಿತು ಸುದ್ದಿಗಾರರ ಜೊತೆಗೆ ಬುಧವಾರ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು, ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು. ಸೈಟುಗಳನ್ನು ಹಂಚಿದ್ದೂ ಅವರೇ. ಈಗ ಜನರ ದಿಕ್ಕು ತಪ್ಪಿಸಲು ಪಾದಯಾತ್ರೆಯ ನಾಟಕ ಆಡಲು ಹೊರಟಿದ್ದಾರೆ ಎಂದು ಸಚಿವರು ಟೀಕಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಬೇಕಾದರೆ ಪಾದಯಾತ್ರೆ ಮಾಡಿಕೊಳ್ಳಲಿ. ಅವರ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶೇಕಡಾ 40ರಷ್ಟು ಕಮೀಷನ್, ಕೋವಿಡ್ ಕಾಲದ ಹಗರಣ, ಮಾರಿಷಸ್ ನಲ್ಲಿ ಇಟ್ಟಿದ್ದಾರೆ ಎನ್ನಲಾಗುತ್ತಿರುವ ಹತ್ತು ಸಾವಿರ ಕೋಟಿ ರೂಪಾಯಿ ಹಗರಣಗಳ ಬಗ್ಗೆ ಅವರು ಜನತೆಗೆ ಸತ್ಯ ತಿಳಿಸಲಿ ಎಂದು ಅವರು ತಿರುಗೇಟು ನೀಡಿದರು.
ಪಾದಯಾತ್ರೆ: ಬಿಜೆಪಿ& ಜೆಡಿಎಸ್ ಮಧ್ಯೆ ಒಮ್ಮತವಿಲ್ಲ
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ನಾಯಕರಾದ ಅಶ್ವತ್ಥ್ ನಾರಾಯಣ, ರಮೇಶ್ ಜಾರಕಿಹೊಳಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೀಗೆ ಇಪ್ಪತ್ತು ಗುಂಪುಗಳಿವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆಯೇ ಒಮ್ಮತವಿಲ್ಲ. ಬಿಜೆಪಿಯಲ್ಲೂ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬೇರೆ ತರಹ ಮಾತನಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

ಬಿಜೆಪಿ ಸರ್ಕಾರ ಇದ್ದಾಗ ಸಾಲು ಸಾಲು ಹಗರಣಗಳು ನಡೆದಿದ್ದವು. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈಗಾಗಲೇ ಅವರು ಇದರ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ ಎಂದು ಅವರು ಪ್ರತಿಪಾದಿಸಿದರು.
ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ...
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪಕ್ಷದ ಹಲವು ವಿಚಾರಗಳ ಬಗ್ಗೆ ಮಾತನಾಡಲು ದೆಹಲಿಗೆ ಹೋಗಿದ್ದಾರೆ. ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಕೆಲವು ಶಾಸಕರಿಗೆ ಮಂತ್ರಿ ಸ್ಥಾನ ಬೇಕೆಂಬ ಆಸೆ ಇರುವುದು, ಮಂತ್ರಿ ಸ್ಥಾನ ಕೇಳುವುದು ಸ್ವಾಭಾವಿಕ ಎಂದು ಸಚಿವರು ಸಂಪುಟ ಪುನಾರಚನೆ ಪ್ರಶ್ನೆಗೆ ಉತ್ತರಿಸಿದರು.
ಸಚಿವ ಜಮೀರ್ ಅಹಮದ್ ಸಂಪುಟ ಪುನಾರಚನೆ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಇದನ್ನೆಲ್ಲ ಹೈಕಮಾಂಡ್ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಅವರು ಇದೇ ವೇಳೆ ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications