MUDA: ಸಿದ್ದರಾಮಯ್ಯ ವಿರುದ್ಧ 65 ಕೇಸುಗಳು: ಇಂದು ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು, ಆಗಸ್ಟ್ 19: ಮುಡಾ ಹಗರಣದ ಕಿಡಿ ಎಲ್ಲಡೆ ವ್ಯಾಪಿಸಿದೆ. ಮೈಸೂರು ಪಾದಯಾತ್ರೆ ಮಾಡಿದ್ದ ರಾಜ್ಯ ಬಿಜೆಪಿಯು ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೂಡ ಬೆಂಬಲಿಸಿದ್ದು ಖಂಡಿಸಿ, ಸಿಎಂ ಸಿದ್ದರಾಮಯ್ಯ ಅವರು ತನಿಖೆ ಎದುರಿಸುವಂತೆ ಆಗ್ರಹಿಸಿ ಇಂದು ಸೋಮವಾರ ಆಗಸ್ಟ್ 19ರಂದು ವಿಧಾನಸೌಧದ ಬಳಿ ಪ್ರತಿಭಟನೆ ಹಮ್ಮಿಕೊಂಡಿದೆ.

ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬೆಳಗ್ಗೆ 11.30ಕ್ಕೆ ಪ್ರತಿಭಟಿಸಲಾಗುವುದು ನಡೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

BJP Held Protest infront of Vidhana Soudha Aug 19th 11 30am Against CM Siddaramaiah MUDA Scam

ಮುಡಾ ಹಗರಣ ವಿರುದ್ಧ ಸಮರ ಸಾರಿರುವ ಬಿಜೆಪಿ ಅದನ್ನು ಮುಂದುವರಿಸುತ್ತಿದೆ. ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೆ ಬಿಜೆಪಿಗೆ ಒಂದು ಹಂತದ ಜಯ ಸಿಕ್ಕಂತಾಗಿದೆ. ಸದ್ಯ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದೆ. ಈ ಮಧ್ಯೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ವಿರುದ್ಧದ ಹಗರಣ ಬೆಂಬಲಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ಸಿಎಂ ವಿರುದ್ಧದ 65 ಕೇಸು ಮುಚ್ಚಿಹಾಕಲು ಯತ್ನ

ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿವೆ. ಅದನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಅಂದಮೇಲೆ ಅವರು ಹೇಗೆ ಕ್ಲೀನ್ ಎನ್ನುವುದು ತಿಳಿದಿಲ್ಲ.

ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು‌. ತನಿಖೆಯಾಗಿ ಸ್ವಚ್ಛವಾಗಿ ಹೊರಬಂದರೆ ಕ್ಲೀನ್ ಎಂದು ನಂಬಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ ಎಂದು ಆರ್.ಅಶೋಕ ದೂರಿದರು.

ಭ್ರಷ್ಟಾಚಾರದ ವಿರುದ್ಧ ಹೋರಾಡಲು ನೈತಿಕತೆ ಇಲ್ಲ

ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದಾರೆ. ಜೊತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾದವರನ್ನು ನೇಮಿಸಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಸರ್ಕಾರ, ದೆಹಲಿ ಹೈಕಮಾಂಡ್ ಗೆ ಎಟಿಎಂ ಆಗಿದೆ‌. ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಎಲ್.ಕೆ.ಅಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಆದರೆ ಈ ಪರಂಪರೆ ಕಾಂಗ್ರೆಸ್ ಗಿಲ್ಲ. ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ ಎಂದು ಕಿಡಿ ಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+