ಹೈಕಮಾಂಡ್, ವಿಜಯೇಂದ್ರ ಕರೆ; ಆಫರ್ ಒಪ್ಪದ ಡಿವಿಎಸ್!
ಬೆಂಗಳೂರು, ಮಾರ್ಚ್ 19: ಲೋಕಸಭೆ ಚುನಾವಣೆ 2024ರ ಬಿಜೆಪಿ ಟಿಕೆಟ್ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ. ವಿ. ಸದಾನಂದ ಗೌಡರ ಕೈ ತಪ್ಪಿದೆ. ಈ ಬಾರಿ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಪಕ್ಷದ ಅಭ್ಯರ್ಥಿ.
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಟಿಕೆಟ್ ಕೈತಪ್ಪಿರುವ ಸದಾನಂದ ಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಟಿಕೆಟ್ ಕೈತಪ್ಪಿರುವ ಸದಾನಂದ ಗೌಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಇದನ್ನು ಸ್ವತಃ ಗೌಡರೇ ಖಚಿತಪಡಿಸಿದ್ದಾರೆ. ಆದರೆ ಅವರು ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬ ಪ್ರಶ್ನೆಗೆ ಸದ್ಯಕ್ಕೆ ಉತ್ತರವಿಲ್ಲ.
ಹೈಕಮಾಂಡ್ ಕರೆ: ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈತಪ್ಪಿರುವ ಡಿ. ವಿ. ಸದಾನಂದ ಗೌಡರಿಗೆ ಹೈಕಮಾಂಡ್ ನಾಯಕರು ಕರೆ ಮಾಡಿದ್ದಾರೆ. ಆಫರ್ ವೊಂದನ್ನು ಅವರಿಗೆ ನೀಡಿದ್ದು, ಈ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಸದಾನಂದ ಗೌಡರ ಜೊತೆ ಮಾತನಾಡಿದ್ದಾರೆ.
ಸದಾನಂದ ಗೌಡರು ಕಾಂಗ್ರೆಸ್ ಸೇರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳ ನಡುವೆಯೇ ಹೈಕಮಾಂಡ್‌ನ ಕರೆ ಗೌಡರಿಗೆ ಬಂದಿದೆ. ಆದರೆ ಈ ವರಿಷ್ಠರ ಆಫರ್‌ಗೆ ಗೌಡರು ಓಕೆ ಅಂದಿಲ್ಲ.
ವರಿಷ್ಠರು ಸದಾನಂದ ಗೌಡರಿಗೆ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಆಫರ್ ನೀಡಿದ್ದಾರೆ. ಈ ಕುರಿತು ಬಿ. ವೈ. ವಿಜಯೇಂದ್ರ ಸಹ ಸದಾನಂದ ಗೌಡರ ಜೊತೆ ಮಾತನಾಡಿದ್ದಾರೆ. ಆದರೆ ಇದಕ್ಕೆ ಇಲ್ಲಿಯ ತನಕ ಗೌಡರು ಒಪ್ಪಿಗೆ ನೀಡಿಲ್ಲ.
ಮಂಗಳವಾರ ಒಕ್ಕಲಿಗರ ಸಂಘದ ನಿರ್ದೇಶಕರು, ಪದಾಧಿಕಾರಿಗಳ ಜೊತೆ ಸದಾನಂದ ಗೌಡರು ಬೆಂಗಳೂರಿನಲ್ಲಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, "ಬುಧವಾರ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ" ಎಂದು ತಿಳಿಸಿದ್ದಾರೆ.
ಸದಾನಂದ ಗೌಡರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನವನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಾಡುತ್ತಿದ್ದಾರೆ. ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್‌ಗೆ ಸೂಕ್ತ ಅಭ್ಯರ್ಥಿ ಸಿಗುತ್ತಿಲ್ಲ. ಆದ್ದರಿಂದ ಗೌಡರು ಪಕ್ಷಕ್ಕೆ ಬಂದರೆ ಅದೇ ಕ್ಷೇತ್ರದ ಟಿಕೆಟ್ ನೀಡುವುದು ಪಕ್ಷದ ಲೆಕ್ಕಾಚಾರವಾಗಿದೆ.
ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಮಂಗಳವಾರ ಸಂಜೆ ನಡೆಯುತ್ತಿದೆ. ಈ ಸಭೆಯಲ್ಲಿ ಸಹ ಸದಾನಂದ ಗೌಡರ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ಕಾಂಗ್ರೆಸ್ ಸೇರಲು ಗೌಡರು ಒಪ್ಪಿಗೆ ನೀಡಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷಕ್ಕೆ ಸೇರಿಸಿಕೊಂಡು ಬಳಿಕ ಅವರು ಬಿಜೆಪಿಗೆ ವಾಪಸ್ ಆದರು. ಈ ಬೆಳವಣಿಗೆ ಬಳಿಕ ಕಾಂಗ್ರೆಸ್ ಸಹ ಆತುರ ಮಾಡದೇ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದೆ.
ಚಿಕ್ಕಬಳ್ಳಾಪುರ ಕ್ಷೇತ್ರ ಬಿಜೆಪಿಗೆ ಕಗ್ಗಂಟಾಗಿದೆ. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್‌ನಲ್ಲಿದ್ದಾರೆ. ಹಾಲಿ ಅವರು ಹೊಸಕೋಟೆ ಶಾಸಕರು. ಆದ್ದರಿಂದ ಅವರಿಗೆ ಟಿಕೆಟ್ ನೀಡುವಂತಿಲ್ಲ. ಸೋಮವಾರ ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವ ಸುಮಲತಾರನ್ನು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವಂತೆ ಆಫರ್ ನೀಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಇಂದು ಡಿ. ವಿ. ಸದಾನಂದ ಗೌಡರಿಗೆ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಚಿಕ್ಕಬಳ್ಳಾಪುರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಚರ್ಚೆ ನಡೆದಿತ್ತು. ಆದರೆ ಅಮಿತ್ ಶಾ ಎಚ್. ಡಿ. ಕುಮಾರಸ್ವಾಮಿ ಕಣಕ್ಕಿಳಿಯುವ ಖಚಿತ ಭರವಸೆ ಕೊಟ್ಟರೆ ಮಾತ್ರ ಕ್ಷೇತ್ರ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಕುಮಾರಸ್ವಾಮಿ ಸ್ಪರ್ಧೆಗೆ ಒಪ್ಪಿಗೆ ನೀಡಿಲ್ಲ. ಇದರಿಂದಾಗಿ ಬಿಜೆಪಿ ಚಿಕ್ಕಬಳ್ಳಾಪುರದ ಅಭ್ಯರ್ಥಿಯಾಗಿ ಹುಡುಕಾಟ ಮುಂದುವರೆಸಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications