ಬಿಜೆಪಿಯು ಬ್ಲ್ಯಾಕ್ಮೇಲರ್ಸ್ ಜನತಾ ಪಕ್ಷ ಎಂದ ಡಿಕೆ ಶಿವಕುಮಾರ್
ಬೆಂಗಳೂರು,ಜನವರಿ 15: ಬಿಜೆಪಿಯು ಬ್ಲ್ಯಾಕ್ಮೇಲರ್ಸ್ ಜನತಾ ಪಕ್ಷ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬ್ಲಾಕ್ ಮೇಲರ್ಸ್ ಪಕ್ಷ ಎಂದು ನಾನು ಹೇಳುತ್ತಿಲ್ಲ, ಬಿಜೆಪಿಯವರೇ ಹೇಳಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಬ್ಲಾಕ್ ಮೇಲ್, ಲಂಚದ ಆರೋಪ ಕೇಳಿ ಬಂದಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಇದರ ನೈತಿಕ ಹೊಣೆ ಹೊರಬೇಕಿದೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಸಂಪುಟ ದರ್ಜೆ ಸಚಿವರಾಗಿ 7 ಶಾಸಕರ ಪ್ರಮಾಣ ವಚನ!
ಬ್ಲಾಕ್ ಮೇಲರ್ ಗಳು, ಲಂಚ ನೀಡಿರುವವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಬಿಜೆಪಿ ಪಕ್ಷದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಶಾಸಕರು ಆರೋಪ ಮಾಡಿದ್ದಾರೆ. ಸಿ.ಡಿ. ಬಗ್ಗೆಯೂ ಬಿಜೆಪಿ ನಾಯಕರು ಪ್ರಸ್ತಾಪಿಸಿದ್ದಾರೆ. ಸಿಡಿಯಲ್ಲಿ ಏನಿದೆ ಎಂಬುದು ಅದನ್ನು ನೋಡಿ, ಚರ್ಚೆ ಮಾಡಿರುವ ಬಿಜೆಪಿಯವರಿಗೆ ಗೊತ್ತಿದೆ ಎಂದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಸಂಪುಟ ವಿಸ್ತರಣೆ ಮಾಡಿದ್ದಾರೆ. ಸಂಪುಟಕ್ಕೆ ಯಾರನ್ನು ಬೇಕಾದರೂ ಸೇರಿಸಿಕೊಳ್ಳಬಹುದು, ಅದಕ್ಕೆ ನಮ್ಮ ಯಾವ ಅಭ್ಯಂತರವೂ ಇಲ್ಲ ಎಂದರು.
ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹಾಗೂ ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ ಅವರು ದೇವರ ಹೆಸರಿನಲ್ಲಿ, ಸುಳ್ಯ ಶಾಸಕ ಎಸ್. ಅಂಗಾರ ಅವರು ದೇವರ ಹೆಸರಿನಲ್ಲಿ, ಬೀಳಗಿ ಶಾಸಕ ಮುರುಗೇಶ್ ನಿರಾಣಿ ಅವರು ದೇವರು ಮತ್ತು ರೈತರ ಹೆಸರಿನಲ್ಲಿ, ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಅವರು ದೇವರ ಹೆಸರಿನಲ್ಲಿ, ಆರ್. ಶಂಕರ್ ಅವರು ದೇವರ ಹೆಸರಿನಲ್ಲಿ, ಸಿ.ಪಿ. ಯೋಗೇಶ್ವರ್ ಅವರು ದೇವರು ಹಾಗೂ ರೈತರ ಹೆಸರಿನಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.