ಬೈರಸಂದ್ರ ವಾರ್ಡ್ ಕಾರ್ಪೊರೇಟರ್ ನಾಗರಾಜ್‌ಗೆ ಶೋಕಾಸ್ ನೋಟಿಸ್!
ಬೆಂಗಳೂರು, ಜೂನ್ 14 : ಬೈರಸಂದ್ರ ವಾರ್ಡ್ ಕಾರ್ಪೊರೇಟರ್ ಎನ್.ನಾಗರಾಜ್‌ಗೆ ಬೆಂಗಳೂರು ಬಿಜೆಪಿ ಘಟಕ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಜಯನಗರ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ ಮಾಡಲಾಗಿದೆ ಎಂದು ಆರೋಪಿಸಿ ನೋಟಿಸ್ ನೀಡಲಾಗಿದೆ.
ಬೆಂಗಳೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ ಶುಕ್ರವಾರ ಕಾರ್ಪೊರೇಟರ್ ಎನ್.ನಾಗರಾಜ್‌ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. 7 ದಿನದಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.
ಜಯನಗರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂಬ ಆರೋಪಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಜೂನ್ 11ರಂದು ನಡೆದ ಜಯನಗರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ಜೂನ್ 4ರಂದು ಎನ್.ನಾಗರಾಜು ಮಾಜಿ ಸಚಿವ ಎಚ್.ಎಂ.ರೇವಣ್ಣ, ರಾಮಲಿಂಗಾ ರೆಡ್ಡಿ, ರಾಮಲಿಂಗಾ ರೆಡ್ಡಿ ಪುತ್ರಿ, ಜಯನಗರದ ಹಾಲಿ ಶಾಸಕಿ ಸೌಮ್ಯಾ ರೆಡ್ಡಿ ಜೊತೆಯಾಗಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದರು.
ಇದರಿಂದಾಗಿ ನಾಗರಾಜು ಕಾಂಗ್ರೆಸ್ ಸೇರಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ನಾಗರಾಜು ಅವರು, 'ಕಾರ್ಯಕ್ರಮವೊಂದರಲ್ಲಿ ಎಲ್ಲರೂ ಭೇಟಿಯಾಗಿದ್ದೆವು. ನಾನು ಕಾಂಗ್ರೆಸ್ ಸೇರಿದ್ದೇನೆ ಎಂಬ ಸುದ್ದಿ ಸುಳ್ಳು' ಎಂದು ಸ್ಪಷ್ಟನೆ ನೀಡಿದ್ದರು.
ಜೂನ್ 11ರಂದು ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದಿತ್ತು. ಜೂನ್ 13ರಂದು ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಅವರು 2 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications