Get Updates
Get notified of breaking news, exclusive insights, and must-see stories!

ಸ್ವಾತಂತ್ರ್ಯ -ಸಮಾನತೆ ಕೇವಲ ಭಾಷಣದ ಸರಕಾಗಬಾರದು: ಸಿಎಂ ಬೊಮ್ಮಾಯಿ

ಬೆಂಗಳೂರು, ಅಕ್ಟೋಬರ್‌, 07: ''ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 100% ಭ್ರಷ್ಟಾಚಾರ ನಡೆದಿದೆ. ಅಧಿಕಾರದಲ್ಲಿದ್ದಾಗ ಹಗರಣಗಳಲ್ಲೇ ಮುಳುಗಿದ್ದ ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಹಾಗೆಯೇ ಸ್ವಾತಂತ್ರ್ಯ -ಸಮಾನತೆ ಕೇವಲ ಭಾಷಣಕ್ಕೆ ಮಾತ್ರ ಸಿಮೀತವಾಗಿರಬಾರದು'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ್ದು, ಪ್ರತಿ ಮೂರು ತಿಂಗಳಿಗೆ ಒಮ್ಮೆ ಯಾವುದಾದರೂ ಪಕ್ಷ ರಾಜ್ಯ ಕಾರ್ಯಕಾರಿಣಿ ಮಾಡುತ್ತಿದ್ದರೆ ಅದು ಬಿಜೆಪಿ ಮಾತ್ರ. ಯಾಕೆಂದರೆ ನಮಗೆ ಕಾರ್ಯಸೂಚಿ ಇದೆ. ಅದರ ಅನುಗುಣವಾಗಿ ಕಾರ್ಯಕ್ರಮ ಇರುತ್ತದೆ. ಅದರ ಕಾರ್ಯ ಸಾಧ್ಯವನ್ನು ಅವಲೋಕನ ಮಾಡಲು ಕಾರ್ಯಕಾರಿಣಿಯನ್ನು ಮಾಡುತ್ತೇವೆ ಎಂದು ಹೇಳಿದರು.

ಇಡೀ ಭಾರತ ದೇಶದಲ್ಲಿ ಸದಾ ಚಲನಶೀಲ ಇರುವ, ಜನರಿಗೆ ಹತ್ತಿರ ಇರುವ, ಅವರ ಭಾವನೆಗಳಿಗೆ ಸ್ಪಂದಿಸುವುದು ಎಂದರೆ ಅದು ಬಿಜೆಪಿ ಪಕ್ಷ ಮಾತ್ರ. ನಾವು ನಮ್ಮ ಕಾರ್ಯಕ್ರಮಗಳನ್ನು ಮತ್ತು ರಾಜಕೀಯ ಸ್ಥಿತಿಗತಿಗಳನ್ನು ಅವಲೋಕನ ಮಾಡಲು ಇದು ಒಂದು ಉತ್ತಮ ವೇದಿಕೆ ಆಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದರು.

ಮಹತ್ವಾಕಾಂಕ್ಷಿಯ ತತ್ವಗಳ ಪಾಲನೆ

ಮಹತ್ವಾಕಾಂಕ್ಷಿಯ ತತ್ವಗಳ ಪಾಲನೆ

ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿದ್ದಾರೆ. ಇನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮರ್ಥ ನಾಯಕತ್ವದಲ್ಲಿ ಮಹತ್ವಾಕಾಂಕ್ಷಿಯ ತತ್ವಗಳನ್ನು ಪಾಲನೆ ಮಾಡಿಕೊಂಡು ನಾವು ಮುನ್ನಡೆಯುತ್ತಿದ್ದೇವೆ. ನಮ್ಮ ಪಕ್ಷದ ಮೇಲೆ ಜನ ಇಟ್ಟಿರುವ ವಿಶ್ವಾಸ ಬೇರೆ ಯಾವುದೇ ಪಕ್ಷದ ಮೇಲೆ ಇಟ್ಟಿಲ್ಲ. ಬಿಜೆಪಿ ನೇತೃತ್ವದಲ್ಲಿ ದೇಶದ 18 ರಾಜ್ಯಗಳಲ್ಲಿ ಸರ್ಕಾರ ನಡೆಸುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು. ಪ್ರಜಾಪ್ರಭುತ್ವದಲ್ಲಿ ನಮಗೆ ನಂಬಿಕೆಯಿದೆ. ಇದು ಯಶಸ್ವಿ ಆಗಬೇಕೆಂದರೆ ರಾಜ್ಯಗಳ ಒಕ್ಕೂಟ ವ್ಯವಸ್ಥೆ ಗಟ್ಟಿ ಆಗಬೇಕು. ವ್ಯಕ್ತಿಯ ಸ್ವಾತಂತ್ರ್ಯ ಮತ್ತು ಸಮಾನತೆ ಕೇವಲ ಭಾಷಣದ ಸರಕಾಗದೇ ನಾವು ಪ್ರತಿಪಾದಿಸುತ್ತಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 3 ವರ್ಷಗಳಾಗಿದೆ. ಇದಕ್ಕೂ ಮುನ್ನ ಅತಿ ಕಡಿಮೆ ಸ್ಥಾನ ಪಡೆದಿದ್ದ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಸರ್ಕಾರ ಜನಸಾಮಾನ್ಯರ ಮನ್ನಣೆಯಿಂದ ಆಗಬೇಕು. ಆದರೆ ಅದನ್ನು ಧಿಕ್ಕರಿಸಿ, ಚುನಾವಣೆಯ ಫಲಿತಾಂಶವನ್ನು ಧಿಕ್ಕರಿಸಿ ವಾಮ ಮಾರ್ಗದಿಂದ ಅಧಿಕಾರ ಹಿಡಿದರು. ಆ ಸರ್ಕಾರ ಪಾಪದ ನೆಲೆಗಟ್ಟಿನ ಮೇಲೆ ನಿಂತಿದ್ದರಿಂದ ಬಹಳ ದಿನ ಬಾಳಲು ಆಗಲಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್‌ ವಿರುದ್ಧ ಮುಖ್ಯಮಂತ್ರಿ ವಾಗ್ದಾಳಿ

ಕಾಂಗ್ರೆಸ್‌ ವಿರುದ್ಧ ಮುಖ್ಯಮಂತ್ರಿ ವಾಗ್ದಾಳಿ

ಕಾಂಗ್ರೆಸ್ ಸರ್ಕಾರ ಮಾಡಿದ 5 ವರ್ಷದ ದುರಾಡಳಿತ ಇನ್ನೂ ಜನರ ಮನಸ್ಸಿನಲ್ಲಿ ಹಚ್ಚ ಹಸಿರಾಗಿದೆ. "ಸರ್ಕಾರದಲ್ಲಿ ಸಾಮಾಜಿಕ ಸಾಮರಸ್ಯ ಇಲ್ಲದೇ ಹಲವಾರು ಕೋಮು ಗಲಭೆಗಳಿಗೆ ಆಸ್ಪದ ಮಾಡಿಕೊಟ್ಟಿದ್ದು, ಇದರಿಂದ ನಮ್ಮ ಕಾರ್ಯಕರ್ತರ ಕಗ್ಗೊಲೆಗಳು ಆದವು. ಆಗ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿತ್ತು. ಕಾಂಗ್ರೆಸ್ ಅವಧಿಯಲ್ಲಿ ಎಲ್ಲ ಇಲಾಖೆಗಳನ್ನು ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆಗಿ ಹಗರಣಗಳ ಸರಮಾಲೆಯನ್ನೇ ನಾವು ನೋಡಿದ್ದೇವೆ. ಕಾಂಗ್ರೆಸ್‌ 100% ಭ್ರಷ್ಟಾಚಾರ ಮಾಡಿದ ಉದಾಹರಣೆ ಜನರ ಮುಂದಿದೆ," ಎಂದು ಬಸವರಾಜ ಬೊಮ್ಮಾಯಿ ಗುಡುಗಿದರು.

"ಸಣ್ಣ ನೀರಾವರಿ ಇಲಾಖೆ ಹಗರಣ, ಒಂದೇ ದಿನದಲ್ಲಿ 36 ಸಾವಿರ ಬೋರ್ವೆಲ್ ಕೊರೆದ ಹಗರಣ, ಹಾಸಿಗೆ-ದಿಂಬು ಖರೀದಿ, ಪೊಲೀಸ್ ನೇಮಕಾತಿ, ಶಿಕ್ಷಕರ ನೇಮಕಾತಿ, ಕೆಪಿಎಸ್‌ಸಿ ಪ್ರಾಸಿಕ್ಯೂಟರ್ ನೇಮಕಾತಿ, ಕಾಮಗಾರಿಗಳಲ್ಲಿ ಭ್ರಷ್ಟಾಚಾರ, ದೇಶದ್ರೋಹಿ ಸಂಸ್ಥೆ ಪಿಎಫ್ಐ ವಿರುದ್ಧ ಪ್ರಕರಣಗಳನ್ನು ತೆಗೆದುಹಾಕಿದ್ದು ಕಾಂಗ್ರೆಸ್ ಆಡಳಿತಾವಧಿಯ ಉದಾಹರಣೆ," ಎಂದು ಆರೋಪಸಿದರು.

ಮಧ್ಯವರ್ತಿಗಳಿಗೆ ಅವಕಾಶ ನಿರ್ಬಂಧ

ಮಧ್ಯವರ್ತಿಗಳಿಗೆ ಅವಕಾಶ ನಿರ್ಬಂಧ

ನಮ್ಮ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಹತ್ತು ಹಲವಾರು ಸುಧಾರಣೆಗಳನ್ನು ತಂದಿದ್ದೇವೆ. ಮಧ್ಯವರ್ತಿಗಳಿಗೆ ಅವಕಾಶ ಮಾಡಿಕೊಡದೇ ಫಲಾನುಭವಿಗಳಿಗೆ ಡಿಬಿಟಿ ಮುಖಾಂತರ ಹಣ ತಲುಪಿಸಲಾಗುತ್ತಿದೆ. ಇದರ ಜೊತೆಯಲ್ಲೇ ರಾಜ್ಯದ ಕಲ್ಯಾಣ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಯುವಕರಿಗೆ ಮತ್ತು ಮಹಿಳೆಯರಿಗೆ ವಿಶೇಷ ಕಾರ್ಯಕ್ರಮಗಳನ್ನು ಮಾಡಿಕೊಡಲಾಗಿದೆ. ಶಿಕ್ಷಣ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ಮಾಡುತ್ತಿದ್ದೇವೆ. ಕಲ್ಯಾಣ ಕರ್ನಾಟಕದ ಅನುದಾನ ಎರಡು ಪಟ್ಟು ಹೆಚ್ಚಿಗೆ ಮಾಡಿದ್ದೇವೆ. ರಾಜ್ಯಕ್ಕೆ ಉದ್ದಿಮೆಗಳನ್ನು ತರುವುದು, ರಾಜ್ಯದ ಸಂಪೂರ್ಣ ಮೂಲಭೂತ ಸೌಕರ್ಯಗಳನ್ನು ಉನ್ನತ ದರ್ಜೆಗೆ ಏರಿಸುವುದು ಸೇರಿ ಹಲವಾರು ಪ್ರಗತಿಪರ ಕೆಲಸಗಳನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ತಮ್ಮ ಪಕ್ಷವನ್ನು ಸಮರ್ಥಿಸಿಕೊಂಡ ಸಿಎಂ

ತಮ್ಮ ಪಕ್ಷವನ್ನು ಸಮರ್ಥಿಸಿಕೊಂಡ ಸಿಎಂ

ಕೋರ್ ಕಮಿಟಿ ಸಭೆಯ ನಿರ್ಣಯದಂತೆ ಸಾಮಾಜಿಕ ನ್ಯಾಯದ ಪರ ಬಿಜೆಪಿ ಎಂದಿಗೂ ಇರುತ್ತದೆ. ಬೇರೆ ಸರ್ಕಾರಗಳು ಮಾಡಲು ಸಾಧ್ಯವಾಗದ ಎಸ್ಸಿಎಸ್ಟಿ ಜನಾಂಗದ ಬಹಳ ವರ್ಷಗಳ ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಕಾನೂನಾತ್ಮಕ ಅಂಶಗಳನ್ನು ಗಮನಿಸಿ ಸಕಾರಾತ್ಮಕ ನಿರ್ಣಯ ಮಾಡಿದ್ದೇವೆ. ಆ ವರ್ಗದಲ್ಲಿ ಬರುವ ಇತರರಿಗೂ ನ್ಯಾಯ ಕೊಡುವ ಕೆಲಸವನ್ನು ಮುಂದಿನ ದಿನಗಳಲ್ಲಿ ನಾವು ಮಾಡುತ್ತೇವೆ. ಹಲವು ವರ್ಷಗಳ ಸಾಮಾಜಿಕ ಸಮಸ್ಯೆಯನ್ನು ಬಗೆಹರಿಸಲು ದಿಟ್ಟ ಕ್ರಮಗಳನ್ನು ನಾವು ತೆಗೆದುಕೊಂಡಿದ್ದೇವೆ.

ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿ, ಭಗವಂತ್ ಖೂಬಾ ಸೇರಿದಂತೆ ಬಿಜೆಪಿ ಹಿರಿಯ - ಕಿರಿಯ ನಾಯಕರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+