ದೇಶದ ಅಭಿವೃದ್ಧಿಗಾಗಿ ಯುವಕರು ಬಿಜೆಪಿ ಬೆಂಬಲಿಸಿ

ಬೆಂಗಳೂರು, ಫೆ.10 : ದೇಶ ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜೆಪಿ ಮಾದರಿಯಲ್ಲಿ ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಎಲ್ಲಾ ಯವಕರು ಬೆಂಬಲ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್ ಕರೆ ನೀಡಿದ್ದಾರೆ.

ಭಾನುವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾನಿಲಯಗಳ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಮಾತನಾಡುತ್ತಿದ್ದರು. ಹಿಂದೆ ದೇಶ ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾಗ, ಜೆಪಿ ಚಳವಳಿ ಆರಂಭಿಸಿದ್ದರು. ಯುವಕರು ಅದಕ್ಕೆ ಬೆಂಬಲ ಸೂಚಿಸಿದ್ದರು ಎಂದರು. [ಮುಂದಿನ ವಾರ ಬಿಜೆಪಿ ಪಟ್ಟಿ]

ಸದ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದಾಗಿ ದೇಶ ಪುನಃ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದ್ದು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ದೇಶವನ್ನು ಅಭಿವೃದ್ಧಿ ಮಾಡುವ ಅಭಿಯಾನ ಆರಂಭಿಸಿದ್ದಾರೆ. ಯುವಕರು ಈ ಆಂದೋಲನಕ್ಕೆ ಬೆಂಬಲ ನೀಡಬೇಕು, ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮತ್ತು ಗುಜರಾತ್ ವಿಧಾನಸಭೆಯ ಅತಿ ಕಿರಿಯ ಶಾಸಕ ಹರ್ಷ ಸಾಂಘ್ವಿ, ಮಧುಕೇಶ್ವರ ದೇಸಾಯಿ ಮುಂತಾದವರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಜೊತೆಗಿನ ಸಂವಾದದ ಚಿತ್ರಗಳು

ಜೆಪಿ ಚಳವಳಿ ನೆನಪು

ಜೆಪಿ ಚಳವಳಿ ನೆನಪು

ವಿದ್ಯಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಜೆಪಿ ಚಳವಳಿ ನೆನಪು ಮಾಡಿಕೊಂಡರು. ನಾನು ಕಾಲೇಜಿನಲ್ಲಿ ಓದುತ್ತಿದ್ದಾಗ ಆ ಚಳವಳಿ ಆರಂಭವಾಗಿತ್ತು. ಯುವಕರು, ರೈತರು ಮತ್ತು ಮಹಿಳೆಯರು ಬೆಂಬಲ ನೀಡಿದರೆ ಒಂದು ಚಳವಳಿ ಯಶಸ್ವಿಯಾಗುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದಿಂದ ದೇಶಕ್ಕೆ ಸಂಕಷ್ಟ

ಕಾಂಗ್ರೆಸ್ ಪಕ್ಷದಿಂದ ದೇಶಕ್ಕೆ ಸಂಕಷ್ಟ

ಕೇಂದ್ರ ಸರ್ಕಾರದ ಭ್ರಷ್ಟಾಚಾರದಿಂದ ಕೂಡಿದ ಆಡಳಿತ ವ್ಯವಸ್ಥೆಯಿಂದಾಗಿ ಇಂದು ದೇಶಕ್ಕೆ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ದೇಶವನ್ನು ಅಭಿವೃದ್ಧಿ ಮಾಡುವ ಅಭಿಯಾನ ಕೈಗೊಂಡಿರುವ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಯುವಕರು ಬೆಂಬಲ ನೀಡಬೇಕೆಂದು ಕರೆ ನೀಡಿದರು.

ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ

ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ

ದೇಶವನ್ನು ಗುಜರಾತ್ ಮಾದರಿಯಲ್ಲಿ ನರೇಂದ್ರ ಮೋದಿ ಅಭಿವೃದ್ಧಿ ಮಾಡುವ ಸಂಕಲ್ಪ ಹೊಂದಿದ್ದಾರೆ. ಅಮೆರಿಕಾ ಸಹ ಗುಜರಾತ್ ಅಭಿವೃದ್ಧಿಯನ್ನು ಶ್ಲಾಘಿಸಿದೆ.ದೇಶವನ್ನು ಮೋದಿ ಅದೇರೀತಿ ಅಭಿವೃದ್ಧಿ ಮಾಡುತ್ತಾರೆ. ಅದಕ್ಕೆ ನಿಮ್ಮ ಬೆಂಬಲ ಬೇಕೆಂದು ಅನಂತ್ ಕುಮಾರ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಯುವಕರರೊಂದಿಗೆ ಚರ್ಚಿಸಿ

ಯುವಕರರೊಂದಿಗೆ ಚರ್ಚಿಸಿ

ಪಕ್ಷದ ಯುವಮೋರ್ಚಾ ಸದಸ್ಯರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ನಮೋ ಚಾಯಿ ಪಾಯಿಂಟ್ ಮಾದರಿಯಲ್ಲಿ, ನಮೋ ಕಾಫಿ ಆರಂಭಿಸುವಂತೆ ಕರೆ ನೀಡಿದರು ಮತ್ತು ನವೋ ಕಾಫಿ ಕೇಂದ್ರಕ್ಕೆ ಚಾಲನೆ ನೀಡಿದರು.

ಸಮಸ್ಯೆ ಬಗೆಹರಿಸುತ್ತೇವೆ

ಸಮಸ್ಯೆ ಬಗೆಹರಿಸುತ್ತೇವೆ

ಯುಪಿಎ ಸರ್ಕಾರ ಬೆಲೆ ಏರಿಕೆ, ದೇಶದ ಗಡಿಯಲ್ಲಿ ಅಭದ್ರತೆ, ಭ್ರಷ್ಟಾಚಾರ, ನಿರುದ್ಯೋಗ ಮುಂತಾದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲವಾಗಿದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ನಾವು ಸಮಸ್ಯೆಗಳನ್ನು ಬಗೆಹರಿಸುತ್ತೇವೆ ನಮಗೆ ಬೆಂಬಲ ನೀಡಿ ಎಂದು ಅನಂತ್ ಕುಮಾರ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಅಭಿವೃದ್ಧಿ ನೋಡಲು ಗುಜರಾತ್ ಗೆ ಬನ್ನಿ

ಅಭಿವೃದ್ಧಿ ನೋಡಲು ಗುಜರಾತ್ ಗೆ ಬನ್ನಿ

ಬಡಕಟ್ಟು ಮಹಿಳೆಯರು ಸರ್ಕಾರದ ನೆರವಿನಿಂದ ಸಾಧಿಸಿರುವ ಕೆಲಸಗಳನ್ನು ಮತ್ತು ರಾಜ್ಯದ ಅಭಿವೃದ್ಧಿಯನ್ನು ನೋಡಲು ನೀವು ಗುಜರಾತ್ ಗೆ ಬನ್ನಿ ಎಂದು ಬಿಜೆಪಿ ಶಾಸಕ ಹರ್ಷ ಸಾಂಘ್ವಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಟೀ ಶರ್ಟ್ ಹಾಕಿಕೊಂಡರೆ ಉಪಯೋಗವಿಲ್ಲ

ಟೀ ಶರ್ಟ್ ಹಾಕಿಕೊಂಡರೆ ಉಪಯೋಗವಿಲ್ಲ

ಯುವಕರು ಮತ್ತು ವಿದ್ಯಾರ್ಥಿಗಳು ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಟೀ ಶರ್ಟ್ ಹಾಕಿಕೊಂಡು ಓಡಾಡಿದರೆ ಸಾಲದು. ದೇಶವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸಹಪಾಠಿಗಳೊಂದಿಗೆ ಚರ್ಚೆ ನಡೆಸಿ, ದೇಶವನ್ನು ಕಟ್ಟಲು ಶ್ರಮಿಸಬೇಕು ಎಂದು ಸಾಂಘ್ವಿ ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+