ಹಾಸನದಲ್ಲಿ ಜೆಡಿಎಸ್ ಸ್ವರೂಪ್... ದ.ಕನ್ನಡ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ
ಬೆಂಗಳೂರು: ಹಾಸನದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತು ಮುಕ್ತಾಯದೊಂದಿಗೆ ಸ್ವರೂಪ್ 406 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾಗೆಯೇ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರಿಗೆ ಹಿನ್ನಡೆಯಾಗಿದೆ. ಉಳಿದಂತೆ ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್, ದಕ್ಷಿಣ ಕನ್ನಡ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹಾಗೂ ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.












Click it and Unblock the Notifications