ಮಹದಾಯಿ ಪ್ರತಿಭಟನೆ : ಆರ್.ಅಶೋಕ್‌ಗೆ ಗಾಯ
ಬೆಂಗಳೂರು, ಡಿಸೆಂಬರ್ 27 : ಮಹದಾಯಿ ವಿಚಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವ ವೇಳೆ ಬಿಜೆಪಿ ನಾಯಕ ಆರ್.ಅಶೋಕ್ ಗಾಯಗೊಂಡಿದ್ದಾರೆ.
ಬುಧವಾರ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಮುಂದಾದರು. ಈ ಸಮಯದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಪೊಲೀಸರು ವಶಕ್ಕೆ ಪಡೆಯುವ ವೇಳೆ ಅಶೋಕ್ ತಲೆಗೆ ಬ್ಯಾರಿಕೇಡ್ ತಗುಲಿತು.

ಆರ್.ಅಶೋಕ್ ಅವರು ಮಲ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದರು. ಪೊಲೀಸರು ಬಿಜೆಪಿ ನಾಯಕರ ತಳ್ಳಾಟದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮಹದಾಯಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಆದರೆ, ಪೊಲೀಸರು ಈ ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ.
ಆರ್.ಅಶೋಕ್, ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ ಮುಂತಾದ ನಾಯಕರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಪೊಲೀಸರು ಎಲ್ಲವರನ್ನು ವಶಕ್ಕೆ ಪಡೆದುಕೊಡರು.












Click it and Unblock the Notifications