• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಮುಖಂಡ ಯೋಗೀಶ್‌ ಕೊಲೆ; ಸಿಬಿಐನಿಂದ ಹಾವೇರಿ ಎಎಸ್‌ಪಿ ವಿಚಾರಣೆ

|

ಬೆಂಗಳೂರು, ಮೇ 26: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಸಿಬಿಐ ಮಂಗಳವಾರ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದೆ.

   ಅಮೆರಿಕಾದಲ್ಲಿ ಸತ್ತವರ ಸಂಖ್ಯೆ ಕೇಳಿದ್ರೆ ಭಯ ಆಗುತ್ತೆ,ಮೋದಿ ಪ್ರಧಾನಿಯಾಗಿರೋದು ಭಾರತೀಯರ ಪುಣ್ಯ

   ನಗರದ ಏರ್ಪೋರ್ಟ್ ರಸ್ತೆಯಲ್ಲಿರುವ ಸಿಬಿಐ ಕಚೇರಿಗೆ ಮಲ್ಲಿಕಾರ್ಜುನ ಬಾಲದಂಡಿ ಹಾಜರಾಗಿ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ.ಯೋಗೀಶ್‌ಗೌಡ ಕೊಲೆ ನಡೆದಾಗ ಮಲ್ಲಿಕಾರ್ಜುನ ಬಾಲದಂಡಿ ಹುಬ್ಬಳ್ಳಿ ಧಾರವಾಡ ಅಪರಾಧ ವಿಭಾಗದ ಡಿಸಿಪಿಯಾಗಿದ್ದರು.

   ಕೇರಳದಲ್ಲಿ ನಾಗರಹಾವಿನಿಂದ ಕಚ್ಚಿಸಿ ಪತ್ನಿ ಕೊಲೆಕೇರಳದಲ್ಲಿ ನಾಗರಹಾವಿನಿಂದ ಕಚ್ಚಿಸಿ ಪತ್ನಿ ಕೊಲೆ

   ಸದ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡು, ಈಗಾಲೇ 14 ಆರೋಪಿಗಳ ಮೇಲೆ ದೋಷಾರೋಪ ಪಟ್ಟಿಯನ್ನು ಧಾರವಾಡ ಕೋರ್ಟ್‌ಗೆ ಸಲ್ಲಿಸಿದೆ. ಹೆಚ್ಚಿನ ವಿಚಾರಣೆಗಾಗಿ ಸಿಬಿಐ ಇನ್ನೂ ಹಲವರನ್ನು ವಿಚಾರಣೆಗೆ ಒಳಪಡಿಸುತ್ತಿದೆ.

   2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಜಿಮ್‌ನಲ್ಲಿ ಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯನಾಗಿದ್ದ ಯೋಗೀಶ್‌ಗೌಡ ಕೊಲೆ ನಡೆದಿತ್ತು. 2019 ರ ಸೆಪ್ಟೆಂಬರ್ನಲ್ಲಿ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿತ್ತು.

   English summary
   BJP Leader Yogesh Gowda Murder Case: Haveri ASP Mallikarjun Baladandi Enquired By CBI In Bengaluru On Tuesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X