ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಡೈರಿ ಪ್ರಕರಣ: ಡಿಕೆ ಶಿವಕುಮಾರ್ ಹೇಳಿದ್ದೇನು?

|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ಡೈರಿ ಬಗ್ಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ | Oneindia Kannada

ಬೆಂಗಳೂರು, ಮಾರ್ಚ್ 23: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ವಿವಿಧ ನಾಯಕರಿಗೆ ಒಟ್ಟು 1,800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತಮ್ಮದೇ ರೀತಿಯಲ್ಲಿ ಕಥೆ ಹೇಳುತ್ತಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಸಂದರ್ಭದಲ್ಲಿ ಮಾತನಾಡುವುದಾಗಿ ಅವರು ತಿಳಿಸಿದ್ದಾರೆ.

BJP leaders coming out with thier own versions DK Shivakumar on Yeddyurappa diary issue

'ಕೆಲವು ಬಿಜೆಪಿ ಮುಖಂಡರು ತಮಗೆ ಗೊತ್ತಿರುವ ಮಾಹಿತಿ ಆಧಾರದಲ್ಲಿ ತಮ್ಮದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಸೂಕ್ತ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷದ ಸದಸ್ಯರು ಇದುವರೆಗೂ ನನ್ನ ಬಳಿ ಮಾತನಾಡಿಲ್ಲ' ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ಡೈರಿ ಪ್ರಕರಣದಲ್ಲಿ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ 2017ರ ಆಗಸ್ಟ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರ ಆಸ್ತಿಪಾಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ಕೆದಕಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಯಡಿಯೂರಪ್ಪ ಅವರ ಡೈರಿ ಆದಾಯ ತೆರಿಗೆ ಇಲಾಖೆ ಕೈಗೆ ಸಿಕ್ಕಿದ್ದೇ ಡಿ.ಕೆ. ಶಿವಕುಮಾರ್ ಅವರ ಮನೆಯಲ್ಲಿ ಎರಡು ವರ್ಷದಿಂದ ಈ ಡೈರಿ ಅವರ ಮನೆಯಲ್ಲಿ ಇದ್ದರೂ ಏನೂ ಮಾಡಿರಲಿಲ್ಲ. ಇಬ್ಬರ ನಡುವಿನ ಸಂಬಂಧ ಚೆನ್ನಾಗಿದ್ದರಿಂದ ಈ ಡೈರಿಯ ಬಗ್ಗೆ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿರಲಿಲ್ಲ ಎಂದು 'ಕ್ಯಾರವಾನ್' ವರದಿ ಮಾಡಿದೆ.

English summary
Congress leader DK Shivakumar said that BJP leaders were coming out with their own versions on Yeddyurappa diary issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X