ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯಪಾಲರ ಮಧ್ಯಪ್ರವೇಶಕ್ಕೆ ರಾಜಭವನ ಚಲೋಗೆ ಬಿಜೆಪಿ ನಿರ್ಧಾರ !

By ಅನಿಲ್ ಆಚಾರ್
|
Google Oneindia Kannada News

ಬೆಂಗಳೂರು, ಜುಲೈ 9: ಕಾಂಗ್ರೆಸ್- ಜೆಡಿಎಸ್ ನ ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ ನಂತರ ಮೈತ್ರಿ ಸರಕಾರವು ಅಲ್ಪ ಮತಕ್ಕೆ ಕುಸಿದಿದೆ. ರಾಜ್ಯದಲ್ಲಿ ಆಡಳಿತ ಯಂತ್ರವೇ ಕುಸಿದುಹೋಗಿದೆ. ಆದ್ದರಿಂದ ರಾಜ್ಯ ಸರಕಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿಯು ಮಂಗಳವಾರ ರಾಜಭವನ ಚಲೋ ನಡೆಸುವ ಸಾಧ್ಯತೆ ಇದೆ.

ಶಾಸಕರ ರಾಜೀನಾಮೆ ಅಂಗೀಕಾರ ಆಗುತ್ತದೆಯೋ? ಇಲ್ಲವೋ? ಸ್ಪೀಕರ್ ನಡೆ ಏನು?ಶಾಸಕರ ರಾಜೀನಾಮೆ ಅಂಗೀಕಾರ ಆಗುತ್ತದೆಯೋ? ಇಲ್ಲವೋ? ಸ್ಪೀಕರ್ ನಡೆ ಏನು?

ಬಿಜೆಪಿಯ ಶಾಸಕಾಂಗ ಸಭೆಯು ಮಂಗಳವಾರ ನಡೆಯಲಿದ್ದು, ಈ ವೇಳೆ ರಾಜಭವನ ಚಲೋ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಜತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ.

BJP likely to decide Raj Bhavan chalo

ಶನಿವಾರದಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹನ್ನೆರಡು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೋಮವಾರದಂದು ಪಕ್ಷೇತರ ಶಾಸಕ ನಾಗೇಶ್ ಅವರು ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದರು. ಅಲ್ಲಿಗೆ ಮೈತ್ರಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ. ಈಗಾಗಲೇ ಸಲ್ಲಿಸಿರುವ ರಾಜೀನಾಮೆಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ.

English summary
Karnataka political crisis: After Congress- JDS coalition government dissent MLA's resignation BJP urging CM HD Kumaraswamy to step down. Otherwise to organise Raj Bhavan chalo by BJP on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X