ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಾತು

|
Google Oneindia Kannada News

ಬೆಂಗಳೂರು, ಜುಲೈ 27: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ ಸೂಕ್ತವಾಗಿದೆ ಎಂದು ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಸಭೆಯ ನಂತರದಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಭಾರತೀಯ ಜನತಾ ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.

Breaking News: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ Breaking News: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಚುನಾಯಿತರಾದ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುತ್ತಾರೆ ಎಂದ ನಂಬಿಕೆಯಿದ್ದು, ನಾವೆಲ್ಲರೂ ಸೇರಿಕೊಂಡು ಅವರ ನೇತೃತ್ವದಲ್ಲಿ ಕೆಲಸ ಮಾಡುತ್ತೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

BJP MLA Basanagowda Patil Yatnal Reaction to Basavaraj Bommai Elected As CM Of Karnataka


ಬಿಎಸ್ ವೈ ವಿರುದ್ಧ ಗುಡುಗುತ್ತಿದ್ದ ಯತ್ನಾಳ್:

ಕರ್ನಾಟಕದ ಉಸ್ತುವಾರಿ ಮುಖ್ಯಮಂತ್ರಿ ಆಗಿರುವ ಬಿ ಎಸ್ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ಹೊಂದಿದ್ದರು. ಬಿಎಸ್ ವೈ ವಿರುದ್ಧ ಪದೇ ಪದೆ ಮಾತಿನ ಬಾಂಬ್ ಸಿಡಿಸುತ್ತಿದ್ದರು. ರಾಜ್ಯದಲ್ಲಿ ಎರಡು ವರ್ಷಗಳ ನಂತರದಲ್ಲಿ ಮುಖ್ಯಮಂತ್ರಿ ಬದಲಾವಣೆ ಶತಸಿದ್ಧ ಎಂದು ಆಗಾಗಾ ಹೇಳಿಕೆ ನೀಡುತ್ತಿದ್ದರು. ಅಂಥ ನಾಯಕ ಯತ್ನಾಳ್ ಇದೀಗ ಬಸವರಾಜ ಬೊಮ್ಮಾಯಿ ಆಯ್ಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ:

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಜುಲೈ 28ರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

English summary
BJP MLA Basanagowda Patil Reaction to Basavaraj Bommai Elected As CM Of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X