Byrati Basavaraj: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಜಾಮೀನು ಮಂಜೂರು
Byrati Basavaraj: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಬಿಕ್ಲುಶಿವ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ಭೈರತಿ ಬಸವರಾಜ್ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಇಂದು ಬಸವರಾಜ್ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಷರತ್ತುಗಳನ್ನ ವಿಧಿಸಿ ಜಾಮೀನು ಮಂಜೂರು
2 ಲಕ್ಷ ರೂಪಾಯಿ ಬಾಂಡ್, ಇಬ್ಬರು ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಿದ್ದು, ಕೆಲ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಸಾಕ್ಷ್ಯ ನಾಶ ಮಾಡುವಂತಿಲ್ಲ. ಕೋರ್ಟ್ ಅನುಮತಿ ಇಲ್ಲದೇ ಹೊರಗಡೆ ಹೋಗುವಂತಿಲ್ಲ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವಂತಿಲ್ಲ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿದೆ.
ಭೈರತಿ ಬಸವರಾಜ್ ಸೇರಿ ಹಲವರ ಮೇಲೆ ದೂರು
ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಕಿತ್ತಗನೂರಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈ 15ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್‌ಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಮೃತನ ತಾಯಿ ಭೈರತಿ ಬಸವರಾಜ್ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು.
ತನ್ನ ಮಗನ ಕೊಲೆ ಹಿಂದೆ ಭೈರತಿ ಬಸವರಾಜ್ ಕೈವಾಡ ಇದೆ ಅಂತಾ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎ1 ಜಗದೀಶ್ ಜೊತೆ ಶಾಸಕರಿಗೆ ನಂಟು ಇದೆ ಎಂಬ ಆರೋಪ ಇದ್ದು, ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ A5 ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಬಂಧನಕ್ಕಾಗಿ ಪೊಲೀಸರು ಹುಡುಕುತ್ತಿದಂತೆ ಅಬರು ತಲೆಮರೆಸಿಕೊಂಡಿದ್ದರು. ಬಳಿಕ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣದಲ್ಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಅಹಮದಾಬಾದ್‌ಗೆ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 12ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಶಾಸಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 7 ದಿನಗಳ ಕಾಲ ಶಾಸಕನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಅದಾದ ನಂತರ 42ನೇ ಎಸಿಜೆಎಂ ನ್ಯಾಯಾಲಯವು ಫೆಬ್ರವರಿ 26ರವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು. ಇದರಿಂದ ಬಿಜೆಪಿ ಶಾಸಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಇದೀಗ ಅವರಿಗೆ ಜಾಮೀನು ದೊರೆತಿದೆ.












Click it and Unblock the Notifications