BJP MLA Munirathna: ಆರ್‌ಆರ್‌ ನಗರ ಬಿಜೆಪಿ ಎಂಎಲ್‌ಎ ಮುನಿರತ್ನ ಮತ್ತೆ ಅರೆಸ್ಟ್‌

ಜಾತಿನಿಂದನೆ, ಬೆದರಿಕೆ ಪ್ರಕರಣದಲ್ಲಿ ನಿನ್ನೆ (ಸೆಪ್ಟೆಂಬರ್‌ 20) ಸಂಜೆ ಮುನಿರತ್ನೆಗೆ ಕೋರ್ಟ್‌ ‍ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಆದರೆ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಆರ್‌.ಆರ್‌ ನಗರ ಬಿಜೆಪಿ ಶಾಸಕ ಮುನಿರತ್ನನನ್ನು ಪೊಲೀಸರು ಪರಪ್ಪನ ಅಗ್ರಹಾರದಲ್ಲೇ ಅರೆಸ್ಟ್‌ ಮಾಡಿದ್ದಾರೆ.

ಮುನಿರತ್ನ ನಾಯ್ಡು ವಿರುದ್ಧ ಅತ್ಯಾಚಾರ ಪ್ರಕರಣ ಕುರಿತು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ಮಹಿಳೆಯ ಹೇಳಿಕೆ ದಾಖಲು ಮಾಡಿಕೊಂಡಿದ್ದರು. ಕೊರೊನಾ ಸಮಯದಲ್ಲಿ ನನ್ನ ಸೇವೆ ಗುರುತಿಸಿ ಕರೆ ಮಾಡಿದ್ದ ಮುನಿರತ್ನ ನಾಯ್ಡು, ನನ್ನನ್ನು ಬಂದು ಭೇಟಿ ಮಾಡಿ ಅಂತಾ ಹೇಳಿದ್ದರು ಎಂದು ದೂರು ದಾಖಲು ಮಾಡಿದ್ದರು.

BJP MLA Munirathna arrested again

ಸಂತ್ರಸ್ತೆ ಹೇಳಿದ್ದೇನು?: ಇನ್ನು ಅವರ ಭೇಟಿ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ನನ್ನನ್ನು ಬೆದರಿಸಿ 2020ರಿಂದ 2022ರವರೆಗೆ ನಿರಂತವಾಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋ ಇಟ್ಟುಕೊಂಡು ಹನಿಟ್ರ್ಯಾಪ್‌ಗೂ ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದರು.

ಜಾತಿನಿಂದನೆ ಹಾಗೂ ವಂಚನೆ ಪ್ರಕರಣದಲ್ಲಿ ಆರ್‌ಆರ್‌ ನಗರ ಶಾಸಕ ಮುನಿರತ್ನ ನಾಯ್ಡುಗೆ ಜಾಮಿನು ದೊರೆತಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಇಬ್ಬರು ಶ್ಯೂರಿಟಿ, 2 ಲಕ್ಷ ರೂಪಾಯಿ ಬಾಂಡ್ ಆಧಾರದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಮತ್ತೆ ಬಂಧಿಸಿ ಕರೆದೊಯ್ದ ಗ್ಗಲೀಪುರ ಪೊಲೀಸರು: ಇನ್ನು ಜಾಮೀನು ಸಿಕ್ಕರೂ ಕೂಡ ಮಾಜಿ ಸಚಿವ ಮುನಿರತ್ನಗೆ ಮಾತ್ರ ಕಂಟಕ ತಪ್ಪಿದ್ದಲ್ಲ ಎನ್ನುವಂತಾಗಿದೆ. ಜೈಲನಿಂದ ಬಿಡುಗಡೆ ಆಗುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸರು ಮತ್ತೆ ಬಂಧಿಸಿ ಕರೆದೊಯ್ದಿದ್ದಾರೆ.

ಈಗಾಗಲೇ ಎರಡು ಪ್ರಕರಣ ದಾಖಲಾಗಿರುವ ಮುನಿರತ್ನ ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂಕೆ 7 ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಈ ಕುರಿತು ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲು ಮಾಡಿದ್ದಾರೆ. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್‌ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+