Dk Shivakumar: "ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಡಿ.ಕೆ ಶಿವಕುಮಾರ್ ಬೇಡ"
ಬಿಜೆಪಿ ಶಾಸಕ ಮುನಿರತ್ನ ಅವರು ಇನ್ನೊಮ್ಮೆ ಸುದ್ದಿಯಲ್ಲಿದ್ದಾರೆ. ಮುನಿರತ್ನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲಿ ಇರುವ ಅಂಶಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಮುಖ್ಯವಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿಕೊಂಡು ಅವರು ಪತ್ರ ಬರೆದಿದ್ದಾರೆ. ಬೆಂಗಳೂರಿನ ಅನುದಾನ ಬೇರೆ ರಾಜ್ಯಗಳ ಪಾಲಾಗುತ್ತಿದೆ. ಇದನ್ನು ತಪ್ಪಿಸಬೇಕಿದೆ ಎಂದು ಮುನಿರತ್ನ ಅವರು ಆಗ್ರಹಿಸಿದ್ದಾರೆ. ಅಲ್ಲದೆ ಬೆಂಗಳೂರಿನ ನಗರಾಭಿವೃದ್ಧಿ ಸಚಿವರನ್ನು ಬದಲಾಯಿಸಿ ಎಂದು ಆಗ್ರಹಿಸಿದ್ದಾರೆ. ಬೆಂಗಳೂರು ಉಸ್ತುವಾರಿ ಸಚಿವರನ್ನಾಗಿ ರಾಮಲಿಂಗಾ ರೆಡ್ಡಿ, ಕೆಜೆ ಜಾರ್ಜ್, ಕೃಷ್ಣ ಬೈರೇಗೌಡ ಇಲ್ಲವೇ ದಿನೇಶ್ ಗುಂಡೂರಾವ್ ಅವರನ್ನು ಮಾಡಿ / ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನ ಕೊಡಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಮುನಿರತ್ನ ನಡುವೆ ವಾಕ್ಸಮರ ಜೋರಾಗಿದೆ. ಈಚೆಗೆ ಬೆಂಗಳೂರಿನ ಲಗ್ಗೆರೆಯಲ್ಲಿ ಮುನಿರತ್ನ ಅವರ ತಲೆಗೆ ಮೊಟ್ಟೆಯಿಂದ ಅಟ್ಯಾಕ್ ಮಾಡಲಾಗಿತ್ತು. ಆಗಲೂ ಮುನಿರತ್ನ ಅವರು ಗಂಭೀರ ಆರೋಪ ಮಾಡಿದ್ದರು. ಇದೀಗ ಮತ್ತೆ ಡಿ.ಕೆ ಶಿವಕುಮಾರ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ಒಳ್ಳೆಯದಕ್ಕಾಗಿ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ. ಯಾಕೆಂದರೆ ಬೆಂಗಳೂರು ಹಾಗೂ ಕರ್ನಾಟಕದ ಅನುದಾನವು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಹೋಗುತ್ತಿದೆ. ಕರ್ನಾಟಕದ 16ನೇ ಬಜೆಟ್ ಮಂಡನೆಯಾಗುತ್ತಿರುವ ಸಂದರ್ಭದಲ್ಲಿಯೇ ಆಂಧ್ರಪ್ರದೇಶ ಸಿಎಂ ಅವರ ಸಹಚರರು ಹಾಗೂ ಆಂಧ್ರದ ಗುತ್ತಿಗೆದಾರರುಗಳು ಇಲ್ಲಿಗೆ ಬಂದಿದ್ದು. ಕರ್ನಾಟಕದ ಗುತ್ತಿಗೆದಾರರ ಮೇಲೆ ಸವಾರಿಗೆ ಸಿದ್ಧರಾಗಿದ್ದಾರೆ. ಹೊರ ರಾಜ್ಯದ ಗುತ್ತಿಗೆದಾರರು ಈಗಾಗಲೇ ಶೇ 12% ಮುಂಗಡ ದುಡ್ಡು ಕೊಟ್ಟಿದ್ದಾರೆ. ಕಾರ್ಯಾದೇಶಕ್ಕೆ ಶೇ 8 ಹಾಗೂ ಅನುದಾನ ಬಿಡುಗಡೆಗೆ ಶೇ 15 ಹಾಗೂ ಒಟ್ಟಾರೆ ಶೇ 35 ರಷ್ಟು ಪಂಚ ತಾರಾ ಹೋಟೆಲ್‌ಗಳಲ್ಲಿ ಡೀಲ್‌ಗಾಗಿ ನಿಗದಿ ಮಾಡಲಾಗಿದೆ ಎಂದು ದೂರಿದ್ದಾರೆ.
ಬೆಂಗಳೂರು ಹಿಂದಕ್ಕೆ ಹೋಗಿದೆ: ಇನ್ನು ಬೆಂಗಳೂರು ಕಳೆದ ಎರಡು ವರ್ಷದ ಅವಧಿಯಲ್ಲಿ 20 ವರ್ಷಕ್ಕೂ ಹೆಚ್ಚು ಹಿಂದಕ್ಕೆ ಹೋಗಿದೆ ಎಂದು ಮುನಿರತ್ನ ಅವರು ಆರೋಪಿಸಿದ್ದಾರೆ. ಬೆಂಗಳೂರು ಈ ಹಿಂದಿನ ಅವಧಿಯಲ್ಲಿ ಹೈದರಾಬಾದ್ ನಗರವನ್ನೂ ಹಿಂದಿಕ್ಕಿತ್ತು. ಆದರೆ ಈಗ ಹಿಂದಕ್ಕೆ ಹೋಗಿದೆ. ನಿಮ್ಮ ನೇತೃತ್ವದಲ್ಲಿ ಬೆಂಗಳೂರಿನ ಎಲ್ಲಾ ಶಾಸಕರನ್ನು ಕರೆದು ಸಭೆ ಮಾಡಿ, ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಮುನಿರತ್ನ ಒತ್ತಾಯಿಸಿದ್ದಾರೆ.
ಬೆಂಗಳೂರಿಗೆ ಡಿ.ಕೆ ಶಿವಕುಮಾರ್ ಬೇಡ: ಇನ್ನು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕೊಡಬೇಡಿ ಎಂದು ಪರೋಕ್ಷವಾಗಿ ಮುನಿರತ್ನ ಹೇಳಿದ್ದಾರೆ. ಬೆಂಗಳೂರು ಉಸ್ತುವಾರಿ ಸಚಿವರನ್ನು ಬದಲಾಯಿಸಿ. ಬೆಂಗಳೂರು ನಗರಾಭಿವೃದ್ಧಿ ಸಚಿವರನ್ನಾಗಿ ರಾಮಲಿಂಗಾ ರೆಡ್ಡಿ, ಕೆಜೆ ಜಾರ್ಜ್ ಯಾರಾದರೂ ಉತ್ತಮ. ಇಲ್ಲವೇ ಕೃಷ್ಣ ಬೈರೇಗೌಡ, ಎಂ ಕೃಷ್ಣಪ್ಪ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಅವಕಾಶ ಕೊಡಿ. ಆಗ ಎರಡು ವರ್ಷಗಳಿಂದ ಆಗಿರುವ ಕಳಂಕವನ್ನು ತೊಳೆಯಬಹುದು. ಈಗ ಭ್ರಷ್ಟಾಚಾರ ಜಾಸ್ತಿಯಾಗಿದೆ ಎಂದಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲೂ ವಿರೋಧ: ಇನ್ನು ಡಿ.ಕೆ ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಬೇಕು ಎಂದು ಸೋಷಿಯಲ್ ಮೀಡಿಯಾದಲ್ಲೂ ಆಗ್ರಹ ಕೇಳಿ ಬರುತ್ತಿದೆ. ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಮೇಲೆ ಬೆಂಗಳೂರಿನ ನಿರ್ವಹಣೆ ಹಳ್ಳ ಹಿಡಿದಿದೆ. ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಂಖ್ಯೆ ಹಾಗೂ ಕಸದ ಸಮಸ್ಯೆ ಹೆಚ್ಚಾಗಿದೆ ಎಂದು ಹಲವರು ಆರೋಪ ಮಾಡಿದ್ದಾರೆ.












Click it and Unblock the Notifications