ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಜೊತೆ ಬಿಜೆಪಿಯ ಶಿವನಗೌಡ ಮಹತ್ವದ ಚರ್ಚೆ, ಆಫರ್‌ಗಳೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 9: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ, ಒಂದೆಡೆ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಕಾಂಗ್ರೆಸ್ ಇದ್ದರೆ ಇನ್ನೊಂದೆಡೆ ಕಾಂಗ್ರೆಸ್ ನಾಯಕರನ್ನು ಸೆಳೆಯಲು ಬಿಜೆಪಿ ತನ್ನೆಲ್ಲಾ ಅಸ್ತ್ರವನ್ನು ಪ್ರಯೋಗಿಸುತ್ತಿದೆ.

ಕೆಲವು ಆಫರ್‌ಗಳೊಂದಿಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಮನೆ ಬಾಗಿಲಿಗೆ ಹೋಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಚಿಕ್ಕೋಡಿ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿಗೆ ಟಿಕೆಟ್ ನೀಡುವುದಾಗಿ ಆಫರ್ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇಷ್ಟೇ ಅಲ್ಲದೆ ಬಳ್ಳಾರಿಯಿಂದ ನಾಗೇಂದ್ರ ಅಥವಾ ಆತನ ಸಹೋದರ ವೆಂಕಟೇಶ್ ಪ್ರಸಾದ್ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿಎಂ ಭೇಟಿ ಮಾಡಿದ ಕಾಂಗ್ರೆಸ್ ಅತೃಪ್ತ ಶಾಸಕರು ಹೇಳಿದ್ದೇನು? ಸಿಎಂ ಭೇಟಿ ಮಾಡಿದ ಕಾಂಗ್ರೆಸ್ ಅತೃಪ್ತ ಶಾಸಕರು ಹೇಳಿದ್ದೇನು?

ಅತೃಪ್ತ ನಾಲ್ಕು ಶಾಸಕರ ಪೈಕಿ ಈಗಾಗಲೇ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಾಗಿದೆ. ಅಷ್ಟೇ ಅಲ್ಲದೆ ಸ್ಪೀಕರ್ ಮಾರ್ಚ್ 12ರಂದು ಸಭೆ ಕರೆದಿದ್ದು ಪಕ್ಷದ ನಿಯಮ ಉಲ್ಲಂಘನೆ ಕುರಿತು ಕ್ಲಾಸ್ ತೆಗೆದುಕೊಳ್ಳಲಿದ್ದಾರೆ.

BJP MLA shivana gouda meets Ramesh jarkiholi Today

ಈಗಾಗಲೇ ರಮೇಶ್ ಜಾರಕಿಹೊಳಿ, ಬಿ ನಾಗೇಂದ್ರ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಬಿಜೆಪಿ ಸೇರಲಿದ್ದಾರೆ ಎನ್ನುವ ಗುಸುಗುಸು ನಡೆಯುತ್ತಿದೆ. ಇದರ ಮಧ್ಯೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಅತೃಪ್ತ ಶಾಸಕರ ಮನ ಒಲಿಸುವ ಕೆಲಸಕ್ಕೂ ಮುಂದಾಗಿದ್ದರು.

ಉಮೇಶ್ ಜಾಧವ್ ಸೇರಿ ನಾಲ್ವರು ಶಾಸಕರಿಗೆ ಸ್ಪೀಕರ್ ನೊಟೀಸ್‌ಉಮೇಶ್ ಜಾಧವ್ ಸೇರಿ ನಾಲ್ವರು ಶಾಸಕರಿಗೆ ಸ್ಪೀಕರ್ ನೊಟೀಸ್‌

ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಬಿಜೆಪಿ ಮತ್ತೆ ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಸೆಳೆಯುವ ಕೆಲಸವನ್ನು ಮುಂದುವರೆಸಿದೆ. ಎಲ್ಲಾ ಮುಂದಿನ ತೀರ್ಮಾನಗಳು ರಮೇಶ್ ಜಾರಕಿಹೊಳಿ ನಿರ್ಧಾರದ ಮೇಲೆ ನಿಂತಿದೆ.

English summary
BJP MLA Shivanagouda naik meets Congress Dissident MLA Ramesh Jarkiholi and he has given offer to Jarkiholi to contest parliamentary poll from BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X