Suresh Kumar: ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ
ಬೆಂಗಳೂರು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅನಾರೋಗ್ಯದ ಕಾರನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರೇಶ್ ಕುಮಾರ್ ಅವರಿಗೆ ಅಪರೂಪದ ಜ್ವರ ಇದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಡೆಸಿದ ಮೈಸೂರು ಪಾದಯಾತ್ರೆಯಲ್ಲಿ ಸುರೇಶ್ ಕುಮಾರ್ ಪಾಲ್ಗೊಂಡಿದ್ದರು, ಅದಾದ ಬಳಿಕ ತಿರುಪತಿಗೂ ಹೋಗಿ ಬಂದಿದ್ದರು. ಸತತ ಸುತ್ತಾಟದಿಂದ ಬಳಲಿದ್ದ ಅವರಿಗೆ ನಾಲ್ಕು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಇದರ ಜೊತೆಗೆ ಮೆದುಳು ಮತ್ತು ಬೆನ್ನುಹುರಿಯಲ್ಲಿ ಕೂಡ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸುರೇಶ್ ಕುಮಾರ್ ಸುಸ್ತಾಗಿದ್ದರಿಂದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುರೇಶ್ ಕುಮಾರ್ ಅವರಿಗೆ ಮ್ಯೂಟೆಂಟ್ ಚಿಕನ್ ಗುನ್ಯಾ ಕಾಯಿಲೆ ಇದೆ ಎಂಧು ತಿಳಿದು ಬಂದಿದೆ. ಮಾಧ್ಯಮಗಳ ವರದಿ ಪ್ರಕಾರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ದುಬಾರಿ ಬೆಲೆಯ ಇಂಜೆಕ್ಷನ್‌ಗಳನ್ನು ನೀಡಲಾಗಿದೆ, ಇನ್ನೂ ಏಳು ದಿನಗಳ ಕಾಲ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.












Click it and Unblock the Notifications