ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮಲಿಂಗಾರೆಡ್ಡಿಯನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ವಿಶ್ವನಾಥ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 25: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಬೇಸರ ತಂದಿತ್ತು.

ಇದೀಗ ರಾಮಲಿಂಗಾರೆಡ್ಡಿ ಅವರ ಮನೆಗೆ ಬಿಜೆಪಿ ಶಾಸಕ ಎಸ್‌ಆರ್‌ ವಿಶ್ವನಾಥ್ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿಗೆ ಅವರನ್ನು ಸೆಳೆಯುವ ಪ್ರಯತ್ನ ಮುಂದುವರೆದಿದೆ.

ರಾಮಲಿಂಗಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ, ಸೌಮ್ಯ ರೆಡ್ಡಿ ಅಸಮಾಧಾನ ರಾಮಲಿಂಗಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ, ಸೌಮ್ಯ ರೆಡ್ಡಿ ಅಸಮಾಧಾನ

ಪಕ್ಷಗಳಿಗಾಗಿ ನಾಲ್ಕೂವರೆ ದಶಕಗಳಿಂದ ದುಡಿದಿರುವವರನ್ನು ಕಡೆಗಣಿಸಿದ್ದಾರೆ ಎಂದು ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯೂ ಕೂಡ ನಡೆದಿತ್ತು.

BJP MLA Vishwanath meets congress senior leader Ramalingareddy

ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಿಜೆಪಿ ಶಾಸಕರಾದ ಸತೀಶ್ ಕೃಷ್ಣ, ಕೃಷ್ಣಪ್ಪ ರಾಮಲಿಂಗಾರೆಡ್ಡಿ ಅವರನ್ನು ರಹಸ್ಯ ಭೇಟಿಯಾದ ಬೆನ್ನಲ್ಲೇ ಎಸ್‌ಆರ್‌ ವಿಶ್ವನಾಥ್ ಅವರು ಭೇಟಿ ಮಾಡಿದ್ದಾರೆ.

ಹೊಸಬರಿಗೆ ಅವಕಾಶ ಮಾಡಿಕೊಟ್ಟಿರುವ ಕಾರಣ ಹಳಬರನ್ನು ಕೈಬಿಡಲಾಗಿದೆ ಎಂದು ಹೇಳಿದ್ದರು ಆದರೆ ಪರಮೇಶ್ವರ, ಡಿಕೆ ಶಿವಕುಮಾರ್ , ಆರ್‌ ವಿ ದೇಶಾಂಪಡೆಗೆ ಸಚಿವ ಸ್ಥಾನ ನೀಡಿರುವುದು ಬೇಸರ ಉಂಟು ಮಾಡಿದೆ ಎಂದು ಹೇಳಿದ್ದರು.

English summary
Cabinet expansion heache is increasing for congress, BJP mla had meeting with senior congress leader Ramalingareddy Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X