ಕಾಂಗ್ರೆಸ್ ನಾಯಕರೇ ಪಾದಯಾತ್ರೆಯೊಂದಿಗೆ ಬೆಂಗಳೂರಿಗೆ ಬರಬೇಡಿ!

ಬೆಂಗಳೂರು, ಜನವರಿ 12; ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ 'ನಮ್ಮ ನೀರು ನಮ್ಮ ಹಕ್ಕು' ಪಾದಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಬಗ್ಗೆ ಕರ್ನಾಟಕ ಹೈಕೋರ್ಟ್ ಅಹ ಆಕ್ಷೇಪ ವ್ಯಕ್ತಪಡಿಸಿದೆ.

ಬುಧವಾರ ಬೆಂಗಳೂರಿನ ಜಗನ್ನಾಥ ಭವನದಲ್ಲಿ ಬೆಂಗಳೂರಿನ ಬಿಜೆಪಿ ಶಾಸಕರು ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಡಾ. ಉದಯ್ ಬಿ. ಗರುಡಾಚಾರ್, ರವಿ ಸುಬ್ರಮಣ್ಯ ಉಪಸ್ಥಿತರಿದ್ದರು.

ಅರವಿಂದ ಲಿಂಬಾವಳಿ ಮಾತನಾಡಿ, "ನಾಡು, ನುಡಿ ಮತ್ತು ಭಾಷೆಯ ವಿಚಾರ ಬಂದಾಗ ನಮ್ಮ ಕರ್ನಾಟಕ ಬಿಜೆಪಿ ಸದಾ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತದೆ. ಆದರೆ ಸದ್ಯ ರಾಜ್ಯದಲ್ಲಿ ನಾವು ಮೇಕೆದಾಟುವಿಗಿಂತ ಹೆಚ್ಚು ಪ್ರಾಮುಖ್ಯ ನೀಡಬೇಕಿರುವುದು ಕೋವಿಡ್ ಹರಡುವಿಕೆ ತಡೆಗೆ" ಎಂದರು.

BJP MLAs Urge The Congress Dont Enter Bengaluru With Padyatra

"ಈಗಾಗಲೇ ಕೇವಲ ಬೆಂಗಳೂರಿನಲ್ಲೇ ದಿನವೊಂದಕ್ಕೆ ಸುಮಾರು ಹದಿನೈದು ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನ ಎಲ್ಲಾ ಶಾಸಕರು ನಮ್ಮ ಕ್ಷೇತ್ರಗಳಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಸಾಕಷ್ಟು ಪ್ರಯತ್ನಿಸುತ್ತಿದ್ದೇವೆ" ಎಂದು ಹೇಳಿದರು.

"ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರಲ್ಲಿ ಈ ಪಾದಯಾತ್ರೆ ಕೈಬಿಡುವಂತೆ ಕೋರಿಕೊಳ್ಳುತ್ತೇನೆ. ಈಗಾಗಲೇ ಕಾಂಗ್ರೆಸ್ 4 ದಿನದ ಪಾದಯಾತ್ರೆ ನಡೆಸಿದ್ದು ಬೇರೆ ಬೇರೆ ಜಿಲ್ಲೆಗಳಿಂದ ಬಂದ ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ" ಎಂದು ತಿಳಿಸಿದರು.

"ಮತ್ತೆ ತಮ್ಮ ಊರುಗಳಿಗೆ ಅವರು ತೆರಳಿ ಅಲ್ಲಿ ಕೋವಿಡ್ ಹಬ್ಬಿಸುತ್ತಾರೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಲು ಕಾಂಗ್ರೆಸ್ ನೇರ ಹೊಣೆಯಾಗಿದೆ" ಎಂದು ಅರವಿಂದ ಲಿಂಬಾವಳಿ ಆರೋಪಿಸಿದರು.

"ಬೆಂಗಳೂರಿನ ಶಾಸಕನಾಗಿ ನನ್ನ ಕರ್ತವ್ಯದ ಭಾಗವಾಗಿ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ, ದಯವಿಟ್ಟು ನೀವು ನಿಮ್ಮ ಪಾದಯಾತ್ರೆಯೊಂದಿಗೆ ಬೆಂಗಳೂರಿಗೆ ಪ್ರವೇಶಿಸಬೇಡಿ. ಪಾದಯಾತ್ರೆಯನ್ನು ಕೈಬಿಡುವಂತೆ ಕಾಂಗ್ರೆಸ್ ನಾಯಕರನ್ನು ಒತ್ತಾಯಿಸುತ್ತೇನೆ" ಎಂದರು.

ಹೈಕೋರ್ಟ್ ಚಾಟಿ ಬೀಸಿದೆ; ಕಾಂಗ್ರೆಸ್ ನಾಯಕರ ಪಾದಯಾತ್ರೆ ನಿಲ್ಲಿಸಲು ಆದೇಶ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬುಧವಾರ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಕರ್ನಾಟಕ ಸರ್ಕಾರ ಮತ್ತು ಕೆಪಿಸಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಕರ್ನಾಟಕ ಸರ್ಕಾರ ಮತ್ತು ಕೆಪಿಸಿಸಿಗೆ ನೋಟಿಸ್ ಜಾರಿ ಮಾಡಿದ್ದು, ಗುರುವಾರ ಉತ್ತರ ನೀಡುವಂತೆ ಸೂಚನೆ ನೀಡಿದೆ. ಹೈಕೋರ್ಟ್‌ನಲ್ಲಿ ಪಿಐಎಲ್ ವಿಚಾರಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಕೆ. ಪಿ. ದೊಡ್ಡಿ ಗ್ರಾಮದಲ್ಲಿ ಊಟದ ವಿರಾಮದ ವೇಳೆ ಸಭೆಯನ್ನು ನಡೆಸಿದರು.

ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ಬಗ್ಗೆ ಮಾತನಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ನೀಡುವ ಸೂಚನೆಯನ್ನು ಪಾಲಿಸಲು ನಾವು ಸಿದ್ಧರಿದ್ದೇವೆ. ಹೈಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆಯೋ ಗೊತ್ತಿಲ್ಲ. ಕಾನೂನು ರೀತಿಯಲ್ಲಿಯೂ ಹೋರಾಟ ಮುಂದುವರೆಸುತ್ತೇವೆ" ಎಂದರು.

ಪಾದಯಾತ್ರೆ ಕುರಿತಂತೆ ಸಲ್ಲಿಕೆಯಾಗಿರುವ ಪಿಐಎಲ್‌ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ಪಾದಯಾತ್ರೆ ತಡೆಯಲು ನೀವು ಅಸಮರ್ಥರಾಗಿದ್ದೀರಾ?, ಪಾದಯಾತ್ರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ನೀಡಿದ್ದು ಹೇಗೆ? ಎಂದು ಪ್ರಶ್ನಿಸಿತು.

ಬೆಂಗಳೂರಿನ ತಿಂಡ್ಲು ನಿವಾಸಿ ಎ. ವಿ. ನಾಗೇಂದ್ರ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಶುಕ್ರವಾರ ಪಾದಯಾತ್ರೆ ಅಂತ್ಯ?; ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಜನವರಿ 14ರ ಶುಕ್ರವಾರ ಅಂತ್ಯಗೊಳಿಸಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪಾದಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+