ಬೆಂಗಳೂರಿಗೆ ವಿಶೇಷ ಅನುದಾನ: ಅನಂತಕುಮಾರ್ ಆಗ್ರಹ

ಬೆಂಗಳೂರಿನ ಯಡಿಯೂರು ವಾರ್ಡ್ ನಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ಬೆಂಗಳೂರಿನ ರಸ್ತೆ, ಒಳಚರಂಡಿ, ಉದ್ಯಾನವನ, ಶೌಚಾಲಯ, ಸ್ವಚ್ಛತೆ, ಕಸ ಸಂಸ್ಕರಣೆ, ಕೆರೆ, ಪರಿಸರ ಇತ್ಯಾದಿಗಳ ಅಭಿವೃದ್ಧಿಗೆ ಈ ವಿಶೇಷ ಪ್ಯಾಕೇಜ್ ಅಗತ್ಯವಿದೆ' ಎಂದಿದ್ದಾರೆ. ( ಬೆಂಗಳೂರು ದಕ್ಷಿಣ: ಅನಂತಕುಮಾರ್, ನಿಲೇಕಣಿ ಏನನ್ತಾರೆ? )
ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್, ಮಹಾಪೌರ ಸತ್ಯನಾರಾಯಣ, ಬೆಂಗಳೂರಿನ ಶಾಸಕರು, ಪಾಲಿಕೆ ಸದಸ್ಯರನ್ನೊಳಗೊಂಡ ನಿಯೋಗವು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಲಿದ್ದೇವೆ ಎಂದು ಅನಂತ ಕುಮಾರ್ ಹೇಳಿದರು.
ಈಗಾಗಲೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಮುಂಬೈ, ಚೆನ್ನೈ, ಕೋಲ್ಕತ್ತಾ, ಹೈದರಾಬಾದ್ ಮತ್ತು ದೆಹಲಿಗೆ ವಿಶೇಷ ಅನುದಾನ ನೀಡಿದೆ. ಆದರೆ ಇಡೀ ದೇಶದಲ್ಲೇ ಅತಿ ಹೆಚ್ಚು ತೆರಿಗೆಗಳ ಆದಾಯವನ್ನು ಕೊಡುತ್ತಿರುವ ಮಹಾನಗರಗಳಲ್ಲಿ ಒಂದಾದ ಬೆಂಗಳೂರನ್ನು ಕಡೆಗಣಿಸಲಾಗಿದೆ. ಹಾಲಿ ಸಂಸತ್ ಅಧಿವೇಶನದಲ್ಲಿಯೂ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅನಂತ ಕುಮಾರ್ ತಿಳಿಸಿದರು.
ಫೆಬ್ರವರಿ 2ನೇ ವಾರದಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ: ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯು 272 ಕ್ಕೂ ಹೆಚ್ಚು ಸ್ಥಾನ ಗಳಿಸಲು ಕರ್ನಾಟಕದಲ್ಲಿ 20ಕ್ಕೂ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಅತ್ಯಗತ್ಯವಾಗಿದೆ. ಇದನ್ನೇ ಪ್ರಧಾನವಾಗಿಸಿಕೊಂಡು ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆ ನಡೆಸಲಾಗಿದೆ. ಫೆಬ್ರವರಿ 2ನೇ ವಾರದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ' ಎಂದು ಅವರು ತಿಳಿಸಿದರು.











Click it and Unblock the Notifications