Vikram Simha Arrest: ಸಂಸದ ಪ್ರತಾಪ್ ಸಹೋದರ ವಿಕ್ರಂ ಸಿಂಹ ಅರಣ್ಯಾಧಿಕಾರಿಗಳ ವಶಕ್ಕೆ!
ಬೆಂಗಳೂರು ಡಿಸೆಂಬರ್ 30: ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದ ಆರೋಪದ ಮೇಲೆ ಸಂಸದ ಪ್ರತಾಪ್ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳ ಇಂದು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದು ಸಾಗಿಸಿದ ಆರೋಪ ವಿಕ್ರಮ್ ಸಿಂಹ ಅವರ ಮೇಲಿದೆ. ಹೀಗಾಗಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿದೆ. ಹೀಗಾಗಿ ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ವಿಕ್ರಮ ವಿಚಾರಣೆ ಮಾಡಲಾಗುತ್ತಿದೆ.

ಹಾಸನದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದು ಸಾಗಿಸಿದ ಆರೋಪ ವಿಕ್ರಮ್ ಸಿಂಹ ಅವರ ಮೇಲಿದೆ. ಹೀಗಾಗಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು. ಸದ್ಯ ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ವಿಕ್ರಮ ವಿಚಾರಣೆ ಮಾಡಲಾಗುತ್ತಿದೆ.
ಹಾಸನದ ನಂದಗೋಡನಹಳ್ಳಿಯಲ್ಲಿ ಹತ್ತು ಎಕರೆ ಬೆಳೆದು ನಿಂತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೂರು ದಾಖಲಾಗಿತ್ತು. ಈ ದೂರನ್ನು ದೀಪಕ್ ಎಂಬುವವರು ನೀಡಿದ್ದರು. ಈ ಮರಗಳನ್ನು ವಿಕ್ರಂ ಸಿಂಹ ಅವರೇ ಕಡಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ತನಿಖೆ ಮಾಡಲು ಅರಣ್ಯ ಇಲಾಖೆ ಕೋರ್ಟ್ ಅನುಮತಿಯನ್ನು ಕೇಳಿತ್ತು. ಮರಗಳ ಮಾರಣ ಹೋಮ ಕೇಸ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಸಿಂಹ, ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ನನ್ನ ಅಣ್ಣನನ್ನು ಟಾರ್ಗೇಟ್ ಮಾಡಲು ಸಂಚು ಇದು. ನಾನು ಯಾವುದೇ ಮರಗಳನ್ನು ಕಡೆದಿಲ್ಲ. ಶುಂಠಿ ಬೆಳೆಯಲು ಆ ಭೂಮಿಯನ್ನು ನಾನು ಜುಲೈ 24ರಿಂದ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ಮರ ಕಡಿದಿರುವುದು ನನಗೆ ಗೊತ್ತಿಲ್ಲ. ಇದೊಂದು ರಾಜಕೀಯ ಪಿತೂರಿ' ಎಂದಿದ್ದಾರೆ.











Click it and Unblock the Notifications