V. Srinivas Prasad: ಹಾಲಿ ಸಂಸದರ ಸ್ಥಿತಿ ಗಂಭೀರ: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು, ಏಪ್ರಿಲ್ 27: ಚಾಮಜರಾಜನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿಜೆಪಿ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ (V. Srinivas Prasad) ಅವರು ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
76 ವರ್ಷದ ಹಿರಿಯ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಅವರು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಈ ಕಾರಣದಿಂದಾಗಿ ಅವರನ್ನು ಶನಿವಾರ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಮೂಲಗಳು ತಿಳಿಸಿವೆ.

ನೆನ್ನೆ ಶುಕ್ರವಾರ ವಷ್ಟೇ ಚಾಮರಾಜನಗರ ಲೋಕಸಭೆ ಚುನಾವಣೆ ನಡೆದಿದೆ. ಈ ಭಾರಿ ಬಿಜೆಪಿ ಬಾಲರಾಜ್ ಅವರು ಕಣಕ್ಕಿಳಿದಿದ್ದರು. ಬಹು ಅಂಗಾಂಗ ವೈಫಲ್, ವಯೋಸಹಜ ಕಾಲೆಯಿಂದ ಬಳಲುತ್ತಿದ್ದ ಹಾಲಿ ಸಂಸದರ ಆರೋಗ್ಯದಲ್ಲಿ ಶನಿವಾರ ಬಹಳಷ್ಟು ಏರುಪೇರು ಉಂಟಾಗಿದೆ.
ಅವರ ಬ್ಲೆಡ್ ಪ್ರಷರ್, ಶುಗರ್ ಪ್ರಮಾಣದಲ್ಲಿ ಏರಿಳಿತ ಉಂಟಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಅವರನ್ನು ತುರ್ತು ಆರೈಕೆ ಕೇಂದ್ರದಲ್ಲಿಟ್ಟು ತಜ್ಞ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ರಾಜಕೀಯ ನಿವೃತ್ತಿ ಘೋಷಣೆ
ಕಳೆದ ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಕುರಿತು ಮಾತನಾಡಿದ್ದರು. ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಸರಿಯುವುದಾಗಿ ಅವರು ಘೋಷಿಸಿದ್ದರು. ಇವರು ಲೋಕಸಭಾ ಚುನಾವಣೆ 2019ರ ಲೋಕಸಭಾ ಚುನಾವಣೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಇವರು 1800ಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣರನ್ನು ಸೋಲಿಸಿದ್ದರು.
ಕಳೆದ ಮೂರು ದಿನಗಳ ಹಿಂದೆಯು ಅವರಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿತ್ತು. ಆಗಲೂ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.












Click it and Unblock the Notifications