• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಸಂಸದ ಉಮೇಶ್ ಜಾಧವ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು

|

ಬೆಂಗಳೂರು, ಸೆಪ್ಟೆಂಬರ್ 28: ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರಿಗೆ ಸಣ್ಣ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಅವರೇ ಸ್ವತಃ ಟ್ವೀಟ್ ಮಾಡಿದ್ದಾರೆ. 'ಬೆಳಗ್ಗೆ ಸಣ್ಣ ಪ್ರಮಾಣದ ಎದನೋವು ಕಾಣಿಸಿಕೊಂಡಿತ್ತು, ಹಾಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ, ಜಯದೇವ ನಿರ್ದೇಶಕ ಡಾ ಮಂಜುನಾಥ್ ಅವರು ಕೆಲವೊಂದು ರುಟಿನ್ ಪರೀಕ್ಷೆಗಳನ್ನು ಮಾಡಿದ್ದಾರೆ.

ವೈದ್ಯರು ಮುಂದಿನ ಸೂಚನೆ ನೀಡುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕಾಗುತ್ತದೆ. ಯಾರೂ ಹೆದರುವ ಅಗತ್ಯವಿಲ್ಲ, ನಾನು ಆದಷ್ಟು ಬೇಗ ಚೇತರಿಸಿಕೊಳ್ಳುತ್ತೇನೆ' ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಚಿವ ಮಾಧುಸ್ವಾಮಿ, ಕಾಂಗ್ರೆಸ್​ ಹಿರಿಯ ಶಾಸಕ ಎಚ್​.ಕೆ.ಪಾಟೀಲ್​ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾಧವ್ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆಯೇ ಇಲ್ಲವೇ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

English summary
BJP MP Umesh Jadhav Hospitalized Due to mild chest pain In Jayadeva Hospital Bengaluru Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X