Get Updates
Get notified of breaking news, exclusive insights, and must-see stories!

ಕರ್ನಾಟಕದ ನೂತನ ಸಿಎಂಗೆ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಟ್ವೀಟ್ ಸಂದೇಶ

ಬೆಂಗಳೂರು, ಜುಲೈ 27: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅಭಿನಂದನೆ ಸಲ್ಲಿಸಿದ್ದಾರೆ.

"ಕರ್ನಾಟಕದ ಬಿಜೆಪಿ ಶಾಸಕಾಂಗ ಸಭೆಯ ನಾಯಕರಾಗಿ ಹಾಗೂ ಮುಖ್ಯಮಂತ್ರಿ ಆಗಿ ಆಯ್ಕೆಯಾದ ಬಿ ಎಸ್ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಒಬ್ಬ ನುರಿತ ರಾಜಕಾರಣಿ ಮತ್ತು ಆಡಳಿತದಲ್ಲಿ ಹಳೆಯ ಕೈ, ಅವರು ರಾಜ್ಯವನ್ನು ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ," ಎಂದು ಬಿ ಎಲ್ ಸಂತೋಷ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನಂತರದ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿರನ್ನು ಆಯ್ಕೆ ಮಾಡಲಾಯಿತು. ಸಿಎಂ ಆಯ್ಕೆ ದಿನವೇ ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಗೋವಿಂದ ಕಾರಜೋಳ, ಆರ್ ಅಶೋಕ್ ಹಾಗೂ ಶ್ರೀರಾಮುಲುರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.

BJP National General Secretary B L Santosh Reaction to Basavaraj Bommai Elected As CM Of Karnataka

ಬುಧವಾರ ಮಧ್ಯಾಹ್ನ 3.30ಕ್ಕೆ ಪ್ರಮಾಣವಚನ:

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಜುಲೈ 28ರ ಮಧ್ಯಾಹ್ನ 3.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Recommended Video

      ಬಸವರಾಜ್ ಬೊಮ್ಮಾಯಿ CM ಎಂದು ಘೋಷಿಸಿದ ಕ್ಷಣ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+