ಕೊರೊನಾ ವಿರುದ್ಧ ಕರ್ನಾಟಕದ ಹೋರಾಟ; ಮಾಹಿತಿ ಪಡೆದ ಜೆ ಪಿ ನಡ್ಡಾ

ಬೆಂಗಳೂರು, ಮಾರ್ಚ್ 28: ಕೊವಿಡ್19 ತಡೆಗಟ್ಟಲು ಕರ್ನಾಟಕ ಕೈಗೊಂಡಿರುವ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಸರ್ಕಾರದಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಶನಿವಾರ ಸ್ಕೈಪ್ ವಿಡಿಯೋ ಕಾಲಿಂಗ್ ಮೂಲಕ ಆಯೋಜಿಸಿದ್ದ ಸಭೆಯಲ್ಲಿ ನಡ್ಡಾ ಅವರು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಂದ ಕೊರೊನಾ ಚಿಕಿತ್ಸೆ ಮತ್ತು ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಸಂಕಷ್ಟದ ಸಂದರ್ಭದಲ್ಲಿ ಎಲ್ಲ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ. ಆರೋಗ್ಯ ಸಿಬ್ಬಂದಿಗೆ ಆನ್‌ಲೈನ್‌ ತರಬೇತಿ ನೀಡಲಾಗುತ್ತಿದೆ. ವೆಂಟಿಲೇಟರ್‌ ಹಾಗೂ ಐಸಿಯು ನಿವರ್ಹಣೆಗೆ ತಾಂತ್ರಿಕ ತರಬೇತಿ ನೀಡಲಾಗಿದೆ. ವೈದ್ಯರು ಸೇರಿ 27 ಸಾವಿರ ಆರೋಗ್ಯ ಸಿಬ್ಬಂದಿ ತುರ್ತು ಸೇವೆಗೆ ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ 1300 ಹಾಸಿಗೆಯ ಆಸ್ಪತ್ರೆ ಸಿದ್ಧವಾಗಿದೆ ಎಂದು ಕೆ ಸುಧಾಕರ್ ಮಾಹಿತಿ ನೀಡಿದರು.

BJP National President JP Nadda Inspected The Karanataka Coronavirus Battle

ರಾಜ್ಯದಲ್ಲಿ ಕೊರೊನಾ ಟೆಸ್ಟ್ ಕಿಟ್, ಪರ್ಸನಲ್‌ ಪ್ರೊಟೆಕ್ಟೀವ್ ಎಕ್ವಿಪ್ಮೆಂಟ್, ಎನ್‌-95 ಮಾಸ್ಕ್, ಟೆಸ್ಟ್‌ ಕಿಟ್‌, ವೆಂಟಿಲೇಟರ್‌ ಮುಂತಾದ ವೈದ್ಯ ಉಪಕರಣಗಳ ಕೊರತೆ ಎದುರಾಗಿದ್ದು, ಅವುಗಳ ಪೂರೈಕೆಗೆ ನೆರವಾಗುವಂತೆ ಸರ್ಕಾರದ ಪರವಾಗಿ ಮಾಡಿಕೊಂಡ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜೆಪಿ ನಡ್ಡಾ, ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.

ಕೊರೊನಾ ವಿರುದ್ಧ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ನಡ್ಡಾ, ಕಾರ್ಮಿಕರು, "ದಿನಗೂಲಿ ನೌಕರರು, ಕಟ್ಟಡ ಕಾರ್ಮಿಕರು ವಲಸೆ ಹೋಗದಂತೆ ತಡೆಯಬೇಕು. ಇರುವಲ್ಲೇ ಅವರಿಗೆ ಎಲ್ಲ ಸೌಲಭ್ಯ ಕಲ್ಪಿಸಿ ಎಂದು ಸೂಚಿಸಿದರು. ಕೊವಿಡ್‌ 19 ಚಿಕಿತ್ಸೆ, ನಿಯಂತ್ರಣ ಹಾಗೂ ಇತರ ಸೌಲಭ್ಯ ಕಲ್ಪಿಸಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯ. ಅದಕ್ಕೆ ಪರಸ್ಪರ ಉತ್ತಮ ಸಂವಹನ ಇರಬೇಕು. ಜತೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಜತೆ ಸಂಪರ್ಕದಲ್ಲಿದ್ದು ಅಗತ್ಯ ಸಲಹೆ, ನೆರವು ಪಡೆದುಕೊಳ್ಳಿ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+