• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಕಾಂಗ್ರೆಸ್ ನವರು, ಗಲಭೆ, ದಲಿತರ ಮೇಲಿನ ದಾಳಿಗೆ ಖಂಡಿಸುವುದಿಲ್ಲ"

|

ಬೆಂಗಳೂರು, ಆಗಸ್ಟ್.14: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ದಾಂಧಲೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ ಎಲ್ ಸಂತೋಶ್ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ಟ್ವೀಟ್ ಮೂಲಕ ಬಿ ಎಲ್ ಸಂತೋಷ್ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ನವರು ಗಲಭೆಗೂ ವಿರೋಧ ತೋರಿಲ್ಲ. ಸ್ವಪಕ್ಷದ ದಲಿತ ಶಾಸಕನ ಮನೆ ಮೇಲಿನ ದಾಳಿಗೂ ಖಂಡಿಸಿಲ್ಲ. ಆದಿ ಶಂಕರಾಚಾರ್ಯರ ಪ್ರತಿಮೆ ಅಪವಿತ್ರಗೊಳಿಸಿದ್ದಕ್ಕೂ ಖಂಡಿಸಿಲ್ಲ.

ಕಾಂಗ್ರೆಸ್ ಮುಖವಾಡದ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್

ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ನವರು ವೋಟ್ ಬ್ಯಾಂಕ್ ರಾಜಕಾರಣ ಎಂಬ ತಮ್ಮ ಹಳೇ ಚಾಳಿಯನ್ನೇ ಮುಂದುವರೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಶ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದ ಸಚಿವ ಡಾ.ಸುಧಾಕರ್:

"ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ದಾಂಧಲೆಯಿಂದಾಗಿ ಕಾಂಗ್ರೆಸ್ ಮುಖವಾಡ ಕಳಚಿದೆ. ಕ್ರೌರ್ಯದ ಮನಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ‌ ಕಲೀಂ ಪಾಷರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೀಚಕರ ಹಡೆಮುರಿ ಕಟ್ಟುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಕಾಂಗ್ರೆಸ್‌ನವರಿಗೆ ಈಗಲಾದ್ರೂ ನಿಜಸತ್ಯದ ಅರಿವಾಯಿತೇ" ಎಂದು ಟ್ವಿಟರ್ ನಲ್ಲಿ ಪ್ರಶ್ನೆ ಮಾಡಿದ್ದರು. ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ ಕಲೀಂ ಪಾಷಾರನ್ನು ಪೊಲೀಸರು ಬಂಧಿಸಿ ಕರೆದೊಯ್ಯುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದ್ದರು.

English summary
BJP National Secretary B L Santhosh Tweet On Bengaluru Violence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X