ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಆಪರೇಷನ್ ಕಮಲ!?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗಂಭೀರ ಆರೋಪ
ಬೆಂಗಳೂರು, ಮಾರ್ಚ್ 23: ಕುದುರೆ ವ್ಯಾಪಾರ, ಪಕ್ಷಾಂತರಕ್ಕೆ ಇದ್ದ ಹೆಸರನ್ನು ಆಪರೇಷನ್ ಎಂದು ಬದಲಾಯಿಸಿದ ಕೀರ್ತಿ ಬಿಜೆಪಿ ಪಕ್ಷಕ್ಕೆ ಸಲ್ಲುತ್ತದೆ. ಆಪರೇಷನ್ ಕಮಲದ ಮೂಲಕ ಈ ಹಿಂದೆ ಸಿದ್ದರಾಮಯ್ಯ ಸರ್ಕಾರವನ್ನು ಪತನಗೊಳಿಸಿದ್ದ ಬಿಜೆಪಿ ಮತ್ತೆ ರಾಜ್ಯದಲ್ಲಿ ಅದೆ ಪ್ರಯತ್ನಗಳನ್ನು ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, 'ಆಪರೇಷನ್ ಕಮಲ'ದ ಭಾಗವಾಗಿ ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ನೀಡಲು ಬಿಜೆಪಿ ತಲಾ 50 ಕೋಟಿ ರೂಪಾಯಿಗಳ ಆಫರ್ ನೀಡುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ನಂತರದ ಉಪಚುನಾವಣೆಯಲ್ಲಿ ಅವರಿಗೆ ಹಣ ನೀಡುವುದಾಗಿ ಭರವಸೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆರೋಪಿಸಿದ್ದಾರೆ. "ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತದೆ ಸರಿ. ಅಕ್ರಮವಾಗಿ ಆಸ್ತಿ ಗಳಿಸಿದ ಶ್ರೀಮಂತರು ವಿರೋಧ ಪಕ್ಷಗಳಲ್ಲಿ ಮಾತ್ರವೇ ಇದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಬಿಜೆಪಿ ಭ್ರಷ್ಟಾಚಾರದ ಪಿತಾಮಹ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಆಪರೇಷನ್ ಕಮಲ ಮತ್ತು ಬಿಜೆಪಿ
ಆಪರೇಷನ್ ಕಮಲ ಎಂಬುದು ಬಿಜೆಪಿ ವಿರೋಧ ಪಕ್ಷದ ಶಾಸಕರ ಪಕ್ಷದ ಶಾಸಕರನ್ನು ತನ್ನತ್ತ ಬರುವಂತೆ ಮಾಡಿ ಇರುವ ಸರ್ಕಾರವನ್ನು ಬೀಳಿಸುತ್ತದೆ. ಬಳಿಕ ತನ್ನದೇ ಸರ್ಕಾರ ರಚಿಸುತ್ತದೆ. ವಿರೋಧ ಪಕ್ಷದ ಶಾಸಕರನ್ನು ಪಕ್ಷಾಂತರ ಮಾಡುವಂತೆ ಮಾಡಿಸುವ ಪ್ರಯತ್ನಗಳು, ಆಮಿಷಗಳ ಕೆಲಸವನ್ನೇ ಆಪರೇಷನ್ ಕಮಲ ಎನ್ನಲಾಗುತ್ತದೆ.

ಮತ್ತೆ ರಾಜ್ಯದಲ್ಲಿ ಈ ಅಪರೇಷನ್ ಕಮಲದ ಸುದ್ದಿ ಹರಿದಾಡುತ್ತಿದೆ. ಈ ಬ್ಗೆಗ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, "ಕರ್ನಾಟಕದಲ್ಲಿ ಬಿಜೆಪಿ ಈ ಹಿಂದೆಯೂ ಆಪರೇಷನ್ ಕಮಲ ನಡೆಸಿತ್ತು. ಅವರು (ಬಿಜೆಪಿ) ವಿರೋಧ ಪಕ್ಷದ ಶಾಸಕರ ರಾಜೀನಾಮೆಯನ್ನು ಖಾತ್ರಿಪಡಿಸಿಕೊಂಡರು. ತಮ್ಮ ಉಪಚುನಾವಣೆಗಳಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಮಾಡಿದರು, ರಾಜೀನಾಮೆ ನೀಡಿದವರಿಗೆ ಕೋಟಿ ರೂಪಾಯಿ ಹಣವನ್ನು ನೀಡಿದರು. ಇಂದಿಗೂ ಅವರು ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಹಲವಾರು ಉದಾಹರಣೆಗಳಿವೆ, ನಾನು ಈಗ ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ನಮ್ಮ ಶಾಸಕರಿಗೆ 50 ಕೋಟಿ ರೂಪಾಯಿ ನೀಡುವುದಾಗಿ ಹೇಳಿ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ" ಎಂದು ಗಂಭಿರ ಆರೋಪ ಮಾಡಿದ್ದಾರೆ.
"ರಾಜೀನಾಮೆ ಬಳಿಕ ಉಪಚುನಾವಣೆಯಲ್ಲಿ ಸಹಾಯ ಮಾಡುವುದಾಗಿ ಬಿಜೆಪಿ ಭರವಸೆ ನೀಡುತ್ತಿದೆ. 50 ಕೋಟಿ ರೂಪಾಯಿ ತೆಗೆದುಕೊಂಡು ರಾಜೀನಾಮೆ ನೀಡಿ, ಜೊತೆಗೆ ನಿಮ್ಮ ಚುನಾವಣೆಯ ವೆಚ್ಚಕ್ಕೂ ಹಣ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಅವರು ಯಾವ ಹಣದ ಭರವಸೆ ನೀಡುತ್ತಿದ್ದಾರೆ..? ಇದು ಕಪ್ಪು ಹಣವಲ್ಲವೇ..? ಇದು ಭ್ರಷ್ಟಾಚಾರದ ಹಣವಲ್ಲವೇ..?. ಬಿಜೆಪಿ ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮೇಕೆದಾಟು ಯೋಜನೆಯ ಜಾರಿಗೆ ಸ್ಟಾಲಿನ್ ಅನುಮತಿಗಾಗಿ ಕಾದು ಕುಳಿತಿಲ್ಲ!
ಇನ್ನು, ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ ಎಂದು ಟ್ರೋಲ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. "ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವೇ, ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು" ಎಂದಿದ್ದಾರೆ.
"ನಿಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಾರೆ, ಮೇಕೆದಾಟು ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಕೂರುತ್ತಾರೆ. ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು. ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ ಆರಂಭ ಮಾಡಲು ನಾವು ತಯಾರಿದ್ದೇವೆ.. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂಬ ಸುಳ್ಳು ಸುದ್ದಿಯ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ" ಎಂದು ಟೀಕಿಸಿದ್ದಾರೆ.
"ಕರ್ನಾಟಕ ಬಿಜೆಪಿ, ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ,
ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ" ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications