ಸಿದ್ದರಾಮಯ್ಯ: ದೇವಸ್ಥಾನ ಸಮಿತಿಗೆ 'ಮುಸ್ಲಿಂ' ಸದಸ್ಯನ ನೇಮಕಕ್ಕೆ ವಿರೋಧ
ಹೊಸಕೋಟೆ, ಮೇ 08: ಕರ್ನಾಟಕದಲ್ಲಿ ಚುನಾವಣೆ ಮುಗಿದಿದ್ದು, ರಾಜಕೀಯ ಪಕ್ಷಗಳ ಪರಸ್ಪರ ದೂರುವಿಕೆ ಮುಂದುವರೆದಿದೆ. ಇದೀಗ ಹಿಂದೂ ದೇವಾಲಯಕ್ಕೆ ಹಿಂದೂಯೇತರ ಅಂದರೆ ಮುಸ್ಲಿಂ ಸಮುದಾಯ ವ್ಯಕ್ತಿಯನ್ನು ಸದಸ್ಯ ಸ್ಥಾನಕ್ಕೆ ನೇಮಕ ಮಾಡಿದ್ದನ್ನು ಬಿಜೆಪಿ ಕಟುವಾಗಿ ವಿರೋಧಿಸಿದೆ.
ಹೋಸ ಕೋಟೆ ಟೌನ್ ಕೋಟೆಯಲ್ಲಿರುವ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Avimukteshwara Temple) ಬ್ರಹ್ಮೋತ್ಸವ ಕಾರ್ಯಕ್ರಮದ ಮೇಲ್ವಿಚಾರಣೆಗೆ ಕಾಂಗ್ರೆಸ್ 'ನವಾಜ್' ಎಂಬ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯರನ್ನಾಗಿದೆ ನೇಮಿಸಿದೆ ಎಂದು ಕರ್ನಾಟಕ ಬಿಜೆಪಿ ದೂರಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು ದೇವಸ್ಥಾನ ಸಮಿತಿ ಪದಾಧಿಕಾರಿಗಳ ಅಧಿಕೃತ ಜ್ಞಾಪನಾ ಪತ್ರ ಪೋಸ್ಟ್ ಮಾಡಿ ಕಾಂಗ್ರೆಸ್ ಬಗ್ಗೆ ಎಚ್ಚರ ಎಂದು ಬರೆದುಕೊಂಡಿದೆ.
ಹತ್ತು ಸದಸ್ಯರಲ್ಲಿ ಒಬ್ಬ ಹಿಂದೂಯೇತರ
ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಈ ಕಾರಣಕ್ಕೆ ಅಭಿವೃದ್ಧಿ ಕಾರ್ಯ ನಿರ್ವಹಿಸುವ ಸಂಬಂಧ ಸಮಿತಿ ಆಯುಕ್ತರು, ಕಾರ್ಯದರ್ಶಿ ಹಾಗೂ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಬೇಕೆಂದು ಹೊಸಕೋಟೆ ಶಾಕಸರು ಕೋರಿರುತ್ತಾರೆ. ಅವರ ಮನವಿ ಮೇರೆಗೆ ಒಬ್ಬರು ಆಯುಕ್ತರು, ಒಬ್ಬರು ಕಾರ್ಯದರ್ಶಿ ಒಳಗೊಂಡು ಹತ್ತು ಮಂದಿ ಸದಸ್ಯರನ್ನು ನೇಮಕ ಮಾಡಿ ತಹಶೀಲ್ದಾರ್ ಮತ್ತು ತಾಲೂಕು ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Congress appointed 'Nawaz' to oversee the Brahmotsavam event at the Shri Avimukteshwara Swamy Temple in Hoskote.
— BJP Karnataka (@BJP4Karnataka) May 8, 2024
After attempting to loot our temples, the Hindu-hating CM @siddaramaiah now seeks to control temples & their resources by appointing non-Hindus.
Congress govt in… pic.twitter.com/We1rCUZdVD
ಬಿಜೆಪಿಯು ತನ್ನ ಪೋಸ್ಟ್‌ನಲ್ಲಿ, ಹಿಂದೂಗಳ ದೇವಸ್ಥಾನಗಳನ್ನು ಲೂಟಿ ಮಾಡಲು ಯತ್ನಿಸಿದ ನಂತರ ಹಿಂದೂ ದ್ವೇಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ಹಿಂದೂಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ಹಿಂದೂಗಳ ಹಕ್ಕು ಕಸಿಯುತ್ತಿದೆ: ಆರೋಪ
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುವ ರಾಹುಲ್ ಗಾಂಧಿಯವರ ಭ್ರಮೆಯ ಕಲ್ಪನೆಗಳನ್ನು ಕಾರ್ಯಗತಗೊಳಿಸಲು ಆತುರ ಸಿದ್ದರಾಮಯ್ಯ ಸರ್ಕಾರ ಆತುರ ತೋರುತ್ತಿದೆ.
ಇಂದು ಕರ್ನಾಟಕ ಹೊಸಕೋಟೆಯ ಒಂದು ದೇವಸ್ಥಾನಕ್ಕೆ ಹೀಗಾದರೆ ಮುಂದಿನ ಅದು ಭಾರತದ ಪ್ರತಿಯೊಂದು ದೇವಾಲಯವನ್ನು ನಿಯಂತ್ರಿಸಬಹುದು. ಜನರು ಕಾಂಗ್ರೆಸ್ ಬಗ್ಗೆ ಎಚ್ಚರ ವಹಿಸಬೇಕು ಎಂದು ಬಿಜೆಪಿ ಹೇಳಿದೆ.
ಈ ಮೂಲಕ ಹಿಂದೂ ದೇವಾಲಯಕ್ಕೆ ಹಿಂದೂಯೇತರ ವ್ಯಕ್ತಿಯ ನೇಮಕವನ್ನು ಸಹಿಸುವುದಿಲ್ಲ ಸಮಯ ರಚನೆಯಲ್ಲಿನ ಸರ್ಕಾರದ ನಡೆಯನ್ನು ಬಿಜೆಪಿ ಖಂಡಿಸಿದೆ.
ದೇವಸ್ಥಾನ ಕುರಿತು ಬಿಜೆಪಿ ಆರೋಪಿಸುತ್ತಿದ್ದಂತೆ ಸ್ವತಃ ಸಿದ್ದರಾಮಯ್ಯನವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಕೈಗೆ ಬಡಿಗೆ ಕೊಟ್ಟಿ ಬಡಿಸಿಕೊಳ್ಳಬೇಡಿ. ನೀವು ಹೇಳಿದ್ದು ಸುಳ್ಳು. ಸುಳ್ಳಿನ ಪ್ಯಾಕ್ಟರಿಯ ಬಿಜೆಪಿ ಸುಳ್ಳು ಸದಸ್ಯ ಪತ್ರ ಪೋಸ್ಟ್ ಮಾಡಿದೆ ಎಂದು ಅವರು ತಿರುಗೇಟು ಕೊಟ್ಟರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications