ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಈದ್ಗಾ ಮೈದಾನ ಲಾಲ್ ಚೌಕ್ ಆಗುತ್ತಿದ್ದೆಯೇ? ಬಿಜೆಪಿ ಪ್ರಶ್ನೆ

|
Google Oneindia Kannada News

ಬೆಂಗಳೂರು, ಆಗಸ್ಟ್ 09: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾನಕ್ಕೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿರುವುದಕ್ಕೆ ಕರ್ನಾಟಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 'ಸಿದ್ದರಾಮಯ್ಯ ಅವರ ಕೃಪಾಶೀರ್ವಾದದಿಂದ ಚಾಮರಾಜಪೇಟೆಯ ಈದ್ಗಾ ಮೈದಾನ ಅಂದಿನ ಲಾಲ್ ಚೌಕ್ ಆಗಿ ಪರಿವರ್ತನೆಯಾಗುತ್ತಿದೆಯೇ?' ಎಂದು ಪ್ರಶ್ನೆ ಮಾಡಿದೆ.

ಶಾಸಕ ಜಮೀರ್‌ ಹೇಳಿಕೆ ಕುರಿತು ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆ, "ರಿಪಬ್ಲಿಕ್‌ ಆಫ್‌ ಚಾಮರಾಜಪೇಟೆ" ಎಂದು ಹ್ಯಾಶ್ ಟ್ಯಾಗ್ ಬಳಸಿ ವ್ಯಂಗ್ಯವಾಡಿದೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ ಎನ್ನಲು ಜಮೀರ್ ಯಾರು?: ಮುತಾಲಿಕ್ ಪ್ರಶ್ನೆಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ ಎನ್ನಲು ಜಮೀರ್ ಯಾರು?: ಮುತಾಲಿಕ್ ಪ್ರಶ್ನೆ

"ರಿಪಬ್ಲಿಕ್ ಆಫ್ ಕನಕಪುರದ ಮಾದರಿಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಪಬ್ಲಿಕ್ ಆಫ್ ಚಾಮರಾಜಪೇಟೆ ಕಟ್ಟಿಕೊಂಡಿದ್ದಾರಾ..? ಇದು ಸ್ವತಂತ್ರ ಭಾರತ. ಇಲ್ಲಿ ಪಾಳೆಗಾರಿಕೆ ನಡೆಸಲು ಮೀರ್ ಸಾದಿಕ್ ಅವರ ಪ್ರೋತ್ಸಾಹ ಇದೆಯೇ..?' ಎಂದು ಕಿಡಿ ಕಾರಿದೆ.

BJP outraged by zameer s statement about Ganeshutsavam at idgah Maidan

"ಚಾಮರಾಜಪೇಟೆ ಮೈದಾನವು, ದಾಖಲೆ ಪ್ರಕಾರ ಕಂದಾಯ ಇಲಾಖೆಗೆ ಸೇರಿದ್ದಾಗಿದೆ. ಆದರೂ, ಸ್ಥಳೀಯ ಶಾಸಕರಾದ ಜಮೀರ್ ತಮ್ಮದೇ ಜಾಗ ಎಂದುಕೊಂಡಂತಿದೆ. ಗಣೇಶೋತ್ಸವ ಮಾಡುವಂತಿಲ್ಲ ಎಂಬ ಆಜ್ಞೆ‌ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಿಲುವು ಕೂಡಾ ಇದೇ ಆಗಿದೆಯೇ?' ಎಂದು ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಹಾಕಿದೆ.

"ಗಣೇಶ ಹಬ್ಬ ಕೇವಲ ಒಂದು ಧರ್ಮಕ್ಕೆ ಸೀಮಿತವಾದ ಹಬ್ಬವಲ್ಲ. ಗಣೇಶೋತ್ಸವದ ಮೂಲಕ ತಿಲಕರು ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದರು. ರಾಷ್ಟ್ರೀಯ ಜೋಡಣೆಗೆ ಬಹುಮುಖ್ಯ ಪಾತ್ರ ವಹಿಸಿದ ಗಣೇಶ ಉತ್ಸವವನ್ನು ಮಾಡುವುದು ಬೇಡ ಎನ್ನಲು ಕಾಂಗ್ರೆಸ್ ನಾಯಕರು ಯಾರು..?" ಎಂದಿದೆ.

BJP outraged by zameer s statement about Ganeshutsavam at idgah Maidan


"ಈದ್ಗಾ ಮೈದಾನದಲ್ಲಿ ಇಷ್ಟು ದಿನ ಧ್ವಜಾರೋಹಣ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಜಮೀರ್ ಅಹ್ಮದ್ ಖಾನ್ ಈಗ ಗಣೇಶೋತ್ಸವಕ್ಕೆ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕೃಪಾಶೀರ್ವಾದದಿಂದ ಚಾಮರಾಜಪೇಟೆಯ ಈದ್ಗಾ ಮೈದಾನ ಅಂದಿನ ಲಾಲ್ ಚೌಕ್ ಆಗಿ ಪರಿವರ್ತನೆಯಾಗುತ್ತಿದೆಯೇ..?" ಎಂದು ಸಿದ್ದರಾಮಯ್ಯ ವಿರುದ್ಧವು ಆಕ್ರೋಶ ಹೊರಹಾಕಿದ್ದಾರೆ.

ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆಗೆಂದು ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಆಗಮಿಸಿದ್ದ ಜಮೀರ್ ಅಹ್ಮದ್ ಸೋಮವಾರ, 'ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ, ಜನವರಿ 26 ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶ ಇದೆ' ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು.

ಇದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಜಮೀರ್ ಅಹ್ಮದ್ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

English summary
BJP outraged by zameer ahmed khan's statement about Ganeshutsavam at idgah Maidan in chamarajpet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X