ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಲಹಂಕದಲ್ಲಿ ರೋಡ್‌ ಶೋ ಮೂಲಕ ಅಮಿತ್ ಶಾ ಮತಬೇಟೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 10 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿನಲ್ಲಿ ಬುಧವಾರ ಸಂಜೆ ರೋಡ್ ಶೋ ನಡೆಸಿದರು. ಬೆಂಗಳೂರು ನಗರದಲ್ಲಿ 2ನೇ ರೋಡ್ ಶೋ ನಡೆಸುವ ಮೂಲಕ ಅವರು ಲೋಕಸಭಾ ಚುನಾವಣೆಗೆ ಮತಬೇಟೆ ನಡೆಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬುಧವಾರ ಸಂಜೆ ಅಮಿತ್ ಶಾ ಅವರು ಯಲಹಂಕದಲ್ಲಿ ರೋಡ್ ಶೋ ನಡೆಸಿದರು. ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಅವರ ಪರವಾಗಿ ಮತಯಾಚನೆ ಮಾಡಿದರು. ಬಿ.ಎನ್.ಬಚ್ಚೇಗೌಡ ಸೇರಿದಂತೆ ಹಲವು ನಾಯಕರು ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದರು.

ಚಿಕ್ಕಬಳ್ಳಾಪುರ: ಜೆಡಿಎಸ್- 'ಕೈ' ಕದನ, ಗೆದ್ದವರಿಗೆ ಕೈ ತುಂಬ ಕೆಲಸಚಿಕ್ಕಬಳ್ಳಾಪುರ: ಜೆಡಿಎಸ್- 'ಕೈ' ಕದನ, ಗೆದ್ದವರಿಗೆ ಕೈ ತುಂಬ ಕೆಲಸ

ಯಲಹಂಕದ ಕೊಂಡಪ್ಪ ಲೇಔಟ್‌ನಿಂದ ಆರಂಭವಾದ ರೋಡ್‌ ಶೋ ಯಲಹಂಕ ಮುಖ್ಯ ರಸ್ತೆಯ ಕೆಂಪೇಗೌಡ ಪ್ರತಿಮೆ ತನಕ ಸುಮಾರು 1.5 ಕಿ.ಮೀ. ನಡೆಯಿತು. ರೋಡ್‌ ಶೋನಿಂದಾಗಿ ಯಲಹಂಕ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

ಚಿಕ್ಕಬಳ್ಳಾಪುರ ಚುನಾವಣಾ ಪುಟ

BJP president Amit Shah road show Yelahanka

ಯಲಹಂಕ ಮುಖ್ಯ ರಸ್ತೆಯಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಅಮಿತ್ ಶಾ ಮಾಲಾರ್ಪಣೆ ಮಾಡಲಿದ್ದಾರೆ ಎಂದು ಘೋಷಣೆ ಮಾಡಲಾಗಿತ್ತು. ಆದರೆ, ಅವರು ಮಾಲಾರ್ಪಣೆ ಮಾಡಲಿಲ್ಲ. ಅಮಿತ್ ಶಾ ತೆರಳಿದ ಬಳಿಕ ಕಾರ್ಯಕರ್ತರು ಮಾಲಾರ್ಪಣೆ ಮಾಡಿದರು.

ಏಪ್ರಿಲ್ 18ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಬಿ.ಎನ್.ಬಚ್ಚೇಗೌಡ, ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಎಂ.ವೀರಪ್ಪ ಮೊಯ್ಲಿ ಅವರು ಕಣದಲ್ಲಿದ್ದಾರೆ.

English summary
BJP national president Amit Shah road show in Bengaluru, Yelahanka. Amit Shah election campaign for Chikkaballapur BJP candidate B.N.Bachegowda. Election will be held on April 18, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X