Budget 2024: ಬೆಲೆ ಇಳಿಕೆ-ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್: ಆರ್.ಅಶೋಕ್

ಬೆಂಗಳೂರು, ಜುಲೈ 23: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್‌ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಬಳಿಕ ಪ್ರತಿಕ್ರಿಯಿಸಿರುವ ಆರ್.ಅಶೋಕ್ ಅವರು, ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಈ ಆಯವ್ಯಯವು ಭಾರತ ಜಗತ್ತಿನಲ್ಲೇ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗಲಿದೆ.

BJP R Ashok Reacts on Union Budget 2024

ರೈತರು, ಮಹಿಳೆಯರು, ಯುವಜನರು, ತೆರಿಗೆ ಪಾವತಿಸುವವರ ಬದುಕನ್ನು ವಿಶ್ಲೇಷಿಸಿ ಅವರ ಅನುಕೂಲಕ್ಕೆ ತಕ್ಕಂತಹ ಬಜೆಟ್ ನೀಡಲಾಗಿದೆ ಎಂದು ಅವರು ಆರ್ಥಿಕ ಸಚಿವರಿಗೆ ಧನ್ಯವಾದ ತಿಳಿಸಿದರು.

ಪಿಎಂ ಗತಿಶಕ್ತಿ ಮಾಸ್ಟರ್‌ ಪ್ಲಾನ್ ಮುಂದುವರಿಕೆ

ಕಾಂಗ್ರೆಸ್‌ ಸರ್ಕಾರ ಯಾವಾಗಲೂ ಅನುದಾನ ತಾರತಮ್ಯದ ಬಗ್ಗೆ ಹೇಳುತ್ತದೆ. 50 ವರ್ಷಗಳ ಅವಧಿಗೆ ಬಡ್ಡಿ ರಹಿತ ಸಾಲ ನೀಡುವ ಪಿಎಂ ಗತಿಶಕ್ತಿ ಮಾಸ್ಟರ್‌ ಪ್ಲಾನ್ ಅನ್ನು ಕೇಂದ್ರ ಸರ್ಕಾರ ಇನ್ನೂ 1 ವರ್ಷ ಮುಂದುವರಿಸಲಿದೆ. ಇದಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, ಖಾಲಿ ಖಜಾನೆಯ ರಾಜ್ಯ ಸರ್ಕಾರ ಇಂತಹ ಯೋಜನೆಗಳನ್ನು ಬಳಸಿಕೊಂಡಾದರೂ ಜನಕಲ್ಯಾಣಕ್ಕೆ ಶ್ರಮಿಸಲಿ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಅನ್ನಭಾಗ್ಯ ಯೋಜನೆ ಮುಂದುವರಿಸಲು ಹಾಗೂ ಅಕ್ಕಿ ನೀಡಲು ಇನ್ನೂ ತಿಣುಕಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು 5 ವರ್ಷ ವಿಸ್ತರಿಸಿ, 80 ಕೋಟಿ ಜನರಿಗೆ ಆಹಾರ ಭದ್ರತೆ ಕಲ್ಪಿಸಿದೆ. ಕ್ಯಾನ್ಸರ್‌ನ 3 ಔಷಧಿಗಳ ಮೇಲಿನ ಕಸ್ಟಮ್‌ ತೆರಿಗೆ ರದ್ದುಪಡಿಸಿ, ರೋಗಿಗಳ ಕುಟುಂಬಕ್ಕೆ ವೆಚ್ಚ ಕಡಿಮೆ ಮಾಡಲಾಗಿದೆ.

BJP R Ashok Reacts on Union Budget 2024

ಚಿನ್ನ, ಬೆಳ್ಳಿ ಕಸ್ಟಮ್ಸ್ ತೆರಿಗೆ ಕಡಿತ

ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.6 ರಷ್ಟು ಕಡಿತ, ಮೊಬೈಲ್ ಹಾಗೂ ಚಾರ್ಜರ್‌ಗಳ ಮೇಲಿನ ತೆರಿಗೆ ಇಳಿಕೆ ಮೊದಲಾದ ಶ್ಲಾಘನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಇದು ಬೆಲೆ ಇಳಿಕೆಯ ಸುರಕ್ಷಿತ ಬಜೆಟ್‌ ಎಂದು ಅವರು ಬಜೆಟ್ ಪಾಸಿಟಿವ್ ಅಂಶಗಳನ್ನು ವಿವರಿಸಿದರು.

ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್

ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಿಂದ ಹೊಸ ಉದ್ಯೋಗಗಳು ಸೃಷ್ಟಿಯಾಗಿ ಜನರಿಗೆ ಸುಭದ್ರ ಬದುಕು ಸಿಗಲಿದೆ. ಈ ದೂರದೃಷ್ಟಿಯ ಯೋಜನೆಯಿಂದ ರಾಜಧಾನಿ ಬೆಂಗಳೂರು ತನ್ನ ಹಿರಿಮೆಯನ್ನು ಉಳಿಸಿಕೊಳ್ಳಲಿದೆ. ಈ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದು ಕೇಂದ್ರ ಸರ್ಕಾರದ ಬಜೆಜ್ ಅನ್ನು ಸಮರ್ಥಿಸಿಕೊಂಡರು.

ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ, 1 ಕೋಟಿ ಕುಟುಂಬಗಳಿಗೆ 300 ಯುನಿಟ್ ವಿದ್ಯುತ್‌, ಮುದ್ರಾ ಯೋಜನೆಯಡಿ 20 ಲಕ್ಷ ರೂ. ಸಾಲ, 1 ಲಕ್ಷ ವಿದ್ಯಾರ್ಥಿಗಳಿಗೆ ಶೇ.3 ಬಡ್ಡಿ ದರದ ಸಾಲ ಮೊದಲಾದ ಯೋಜನೆಗಳು ಜನಕಲ್ಯಾಣಕ್ಕೆ ಹೊಸ ದಿಕ್ಕು ನೀಡಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+