ಅಪನಂಬಿಕೆ ಸರ್ಕಾರದಿಂದ 'ನಂಬಿಕೆ ನಕ್ಷೆ' ಯೋಜನೆ ಜಾರಿ: ಘೋಷಿತ ಯೋಜನೆಗಳ ಪಟ್ಟಿ ಬಿಚ್ಚಿಟ್ಟ ಆರ್.ಅಶೋಕ್
ಬೆಂಗಳೂರು, ಸೆಪ್ಟಂಬರ್ 03: ಬೆಂಗಳೂರು ಅಭಿವೃದ್ಧಿಗೆ 'ಬ್ರ್ಯಾಂಡ್ ಬೆಂಗಳೂರು' ಯೋಜನೆ ಬಗ್ಗೆ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ 'ನಂಬಿಕೆ ನಕ್ಷೆ' ಯೋಜನೆ ಜಾರಿಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದೀಗ ಇದಕ್ಕೆ ಕೌಂಟರ್ ಕೊಟ್ಟಿರುವ ವಿಪಕ್ಷ ನಾಯಕ ಆರ್. ಅಶೋಕ್ ಅವರು, ಅಪನಂಬಿಕೆ ಸರ್ಕಾರದಿಂದ 'ನಂಬಿಕೆ ನಕ್ಷೆ' ಯೋಜನೆ ಜಾರಿಗೆ ತರಲಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯ ಸರ್ಕಾರವು ಕಟ್ಟಡ ನಕ್ಷೆ ಮಂಜೂರಾತಿಗೆ 'ನಂಬಿಕೆ ನಕ್ಷೆ' ಯೋಜನೆ ಜಾರಿಗೆ ಬಗ್ಗೆ ತಿಳಿಸಿದೆ. ಈ ಕುರಿತು ಆರ್.ಅಶೋಕ್ ಅವರು ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸರ್ಕಾರದ ಯೋಜನೆ ಬಗ್ಗೆ ಲೇವಡಿ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಅವರು ಹೇಳಿರುವುದು 'ಬ್ರ್ಯಾಂಡ್ ಬೆಂಗಳೂರು' ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ ಎಂದು 'ನಂಬಿಕೆ ನಕ್ಷೆ' ಯೋಜನೆಗೆ ಜಾರಿಗೂ ಮೊದಲೇ ಟಾಂಗ್ ಕೊಟ್ಟಿದ್ದಾರೆ.
ಡಿಕೆಶಿ ಪಾರ್ಟ್‌ಟೈಮ್ ಮಂತ್ರಿ: ಆರ್.ಅಶೋಕ್
ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಎಂದು ಜರಿದಿದ್ದಾರೆ. ಡಿಕೆ ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲದಂತಾಗಿದೆ ಎಂದರು. ಜೊತೆಗೆ ಜನರು ಯಾವುದರಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ, ಯಾವುದೆಲ್ಲ ಘೋಷಣೆಗಳಲ್ಲಿಯೇ ಉಳಿದಿವೆ ಎಂದು ಅವರು ಪಟ್ಟಿಕೊಟ್ಟಿದ್ದಾರೆ.
ಅಪನಂಬಿಕೆ ಸರ್ಕಾರದಿಂದ
— R. Ashoka (@RAshokaBJP) September 3, 2024
ನಂಬಿಕೆ ಯೋಜನೆ
ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ @DKShivakumar
ಅವರು ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ.
ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ…
ಜನರಿಗೆ ಇದರಲ್ಲೆಲ್ಲ ನಂಬಿಕೆಯೇ ಇಲ್ಲ: ಆರ್.ಅಶೋಕ್
* ಬೆಂಗಳೂರು ಜನರಿಗೆ ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ
* ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ
* ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ
* ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ
* ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ
* ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.
ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ 'ನಂಬಿಕೆ' ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.












Click it and Unblock the Notifications